Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಜೂ.20ರಿಂದ 3ದಿನಗಳ ಕಾಲ ಕಲ್ಲಗಂಗೂರು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ ಸ್ಥಾಪನೆಯ 19ನೇಯ ವಾರ್ಷಿಕೋತ್ಸವ
ಪ್ರಮುಖ ಸುದ್ದಿ

ಜೂ.20ರಿಂದ 3ದಿನಗಳ ಕಾಲ ಕಲ್ಲಗಂಗೂರು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ ಸ್ಥಾಪನೆಯ 19ನೇಯ ವಾರ್ಷಿಕೋತ್ಸವ

ಜೂ.20ರಂದು ಗುರುವಾರ ಬೆಳಿಗ್ಗೆ 10ಕ್ಕೆ ಕಲ್ಲಗಂಗೂರು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ಯುವ ಸಮ್ಮೇಳನ
davangerevijaya.comBy davangerevijaya.com18 June 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಶಿವಮೊಗ್ಗ:  ಜೂ.20ರಿಂದ 3ದಿನಗಳ ಕಾಲ ಕಲ್ಲಗಂಗೂರು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಶ್ರಮದ ಸ್ಥಾಪನೆಯ 19ನೇಯ ವಾರ್ಷಿಕೋತ್ಸವದ ಅಂಗವಾಗಿ ಯುವ ಸಮ್ಮೇಳನ ಹಾಗೂ ವಿಶೇಷ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿಯವರು ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಧ್ಯಾತ್ಮ ಬೆಳವಣಗೆಯಲ್ಲಿ ತನ್ನದೇ ಆದ ಪಾತ್ರವನ್ನು ವಹಿಸುತ್ತಿರುವ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮವು 2005ರಲ್ಲಿ ಇಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೂ ಹಲವಾರು ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಮತ್ತು ಶೈಕ್ಷಣ ಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದು ಮಾಹಿತಿ ನೀಡಿದರು.

ಜೂ.20ರಂದು ಗುರುವಾರ ಬೆಳಿಗ್ಗೆ 10ಕ್ಕೆ ಕಲ್ಲಗಂಗೂರು ಆಶ್ರಮದ ಪ್ರಾರ್ಥನ ಮಂದಿರದಲ್ಲಿ ಯುವ ಸಮ್ಮೇಳನವು ಜರುಗಲಿದ್ದು, ಇದರ ಉದ್ಘಾಟನೆಯನ್ನು ಗದಗ-ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪ.ಪೂ.ಶ್ರೀ ನಿರ್ಭಯಾನಂದರು ಉದ್ಘಾಟಿಸಲಿದ್ದು, ಬಳಿಕ ಭಾರತಕ್ಕೆ ಬೇಕಾಗಿರುವುದು ಉಜ್ವಲ ಭಾರತೀಯತೆ ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡುವರು. ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತಂದ ಕ್ಯಾ.ನವೀನ್ ನಾಗಪ್ಪ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.

ಪ.ಪೂ.ಸ್ವಾಮಿ ವಿನಯಾನಂದ ಸರಸ್ವತಿ, ಪ.ಪೂ.ಸ್ವಾಮಿ ಪ್ರಕಾಶಾನಂದಜೀ ಮತ್ತು ಪ.ಪೂ. ಶ್ರೀ ಜ್ಞಾನಂದ ಸ್ವಾಮೀಜಿಯವರು ದಿವ್ಯಾ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಅದೇ ದಿನ ಸಂಜೆ 5.30ಕ್ಕೆ ವಿನೋಬನಗರ ವಿಪ್ರ ಟ್ರಸ್ಟ್ನಲ್ಲಿ ಜರುಗುವ ಶ್ರೀರಾಮಕೃಷ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶ್ರೀನಿರ್ಭಯಾನಂದ ಸರಸ್ವತಿ ಮಹಾರಾಜ್ ಸ್ವಾಮೀಜಿಯವರು ಸಾಧಕ ಚಕ್ರವರ್ತಿ ಶ್ರೀರಾಮಕೃಷ್ಣ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಜೂ.21ರ ಶುಕ್ರವಾರ ಸಂಜೆ 5.30ಕ್ಕೆ ವಿಪ್ರ ಟ್ರಸ್ಟ್ನಲ್ಲಿ ಹರಿಹರದ ರಾಮಕೃಷ್ಣ ವಿವೇಕಾನಂದಶ್ರಾಮದ ಸ್ವಾಮಿ ಶಾರದೇಶಾನಂದಜೀ ಮಹಾರಾಜ್‌ರವರು ಶ್ರೀ ಶಾರದಾ ದೇವಿಯವರ ಜೀವನ ಮತ್ತು ಸಾಧನೆಯ ಕುರಿತು ಪ್ರವಚನ ನೀಡಲಿದ್ದಾರೆ. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ.ಪೂ.ಶ್ರೀ ವಿನಾಯನಂದ ಸ್ವಾಮೀಜಿ, ಪ್ರಕಾಶನಂದಸ್ವಾಮೀಜಿ ಮತ್ತು ಶ್ರೀಜ್ಞಾನನಂದ ಸ್ವಾಮೀಜಿಯವರು ಉಪಸ್ಥಿತರಿರುವರು ಎಂದು ತಿಳಿಸಿದರು.

ಜೂ.22ರ ಶನಿವಾರ ಸಂಜೆ 5.30ಕ್ಕೆ ವಿನೋಬನಗರದ ವಿಪ್ರಟ್ರಸ್ಟ್ನಲ್ಲಿ ಜರುಗುವ ಕಾರ್ಯಕ್ರಮದಲ್ಲಿ ರಾಣೆಬೆನ್ನೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪ.ಪೂ. ಸ್ವಾಮಿ ಪ್ರಕಾಶನಂದಜೀ ಮಹಾರಾಜ್ ಅವರು ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಸಂದೇಶಗಳು ಕುರಿತು ಮಾತನಾಡುವರು. ಶಿವಮೊಗ್ಗ ಜಿ.ಪಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಮತ್ತು ಜ್ಞಾನಾನಂದ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸುವರು ಎಂದು ಅವರು ಮಾಹಿತಿ ನೀಡಿದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪ್ರತಿನಿತ್ಯ ವೇದಘೋಷ, ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, ಭಾಗವಾನ್ ನಾಮ ಸಂಕೀರ್ತನ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಎಂ.ಎನ್.ಸುAದರರಾಜ್, ದಾನಿಗಳಾದ ಡಾ.ಚಿಕ್ಕಸ್ವಾಮಿ, ಸೂರ್ಯನಾರಾಯಣ, ರೇಣುಕೇಶ್, ನಾಗೇಂದ್ರ ಶಿರೂರ್‌ಕರ್, ಶ್ರೀಕಾಂತ ಮೊದಲಾದವರು ಇದ್ದರು.

He stabbed him with a knife raised a stone on his head and killed him
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.