ದಾವಣಗೆರೆ : ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಗೆಲುವಿಗೆ ಶಿಮುಲ್ ಉಪಾಧ್ಯಕ್ಷ ಎಚ್.ಕೆ.ಬಸಪ್ಪ ಹಗಲಿರುಳು ಚನ್ನಗಿರಿಯಲ್ಲಿ ಶ್ರಮಿಸಿದ್ದು, ಕಾಂಗ್ರೆಸ್ ಗೆದ್ದ ಹಿನ್ನೆಲೆಯಲ್ಲಿ ದಾವಣಗೆರೆ ಪ್ರಭಾಮಲ್ಲಿಕಾರ್ಜುನ್ ನಿವಾಸದಲ್ಲಿ ಸನ್ಮಾನಿಸಿದರು. ನಂತರ ಮಾತನಾಡಿದ ಎಚ್.ಕೆ.ಬಸಪ್ಪ ನಾನು ಸೇರಿದಂತೆ ಹಲವರು ಚನ್ನಗಿರಿಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಪರ ಕ್ಯಾಂಪೆನ್ ಮಾಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ಪರಿಣಾಮ ಕಾಂಗ್ರೆಸ್ ಗೆದ್ದಿದೆ. ಕಾಂಗ್ರೆಸ್ ಗೆದ್ದಿರುವ ಕಾರಣ ತ್ರಿಬಲ್ ಎಂಜಿನ್ ಸರಕಾರ ಬಂದಿದ್ದು, ದಾವಣಗೆರೆ ಇನ್ನಷ್ಟು ಅಭಿವೃದ್ಧಿಗೊಳ್ಳುತ್ತದೆ ಎಂದರು.