ಬೆಂಗಳೂರು: ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ನಿರ್ಮಿಸಿದ ಅರುಣ್ ಯೋಗಿರಾಜ್ ಹುಲಿಕಲ್ ನಟರಾಜ್ , ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾಚೌಧರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲೆ, ಸಾಹಿತ್ಯ, ಜಾನಪದ ಪರಿಸರ, ಕ್ರೀಡೆ, ಪತ್ರಿಕೋದ್ಯಮ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 69 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ತಶಸ್ತಿ ನೀಡಲಾಗಿದೆ ಎಂದು ತಿಳಿಸಿದರು. ಇದೇವೇಳೆ ವಿವಿಧ ಸಾಧನೆ ಮಾಡಿದ 50 ಪುರುಷರು ಹಾಗೂ 59 ಮಹಿಳಾ ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ನವೆಂಬರ್ ಒಂದರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ 50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69+100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದರು. ಈ ಬಾರಿ ಪ್ರಶಸ್ತಿಗಾಗಿ ಒಟ್ಟು 1575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧು ಮೂಲಕ 1,309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕಷವಾಗಿ ಪರಿಶೀಲನೆ ಮಾಡಿ ಅರ್ಹರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿಧ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯ ಕಾಪಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1 575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ಶ್ರೀ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ. ಇವರ ಹೆಸರನ್ನು ಸಹ ಪರಿಗಣಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ಶ್ರೀ ನರಸಿಂಹಲು, ಬೀದರ್ ಜಿಲ್ಲೆ ಇವರನ್ನು ಸಹ ಪರಿಗಣಿಸಲಾಗಿದೆ. ಇದರಲ್ಲಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದರು. ರಾಜ್ಯೋತ್ಸವ ಪ್ರಶಸ್ತಿಯ ಮೊತ್ತ 5 ಲಕ್ಷ ಹಾಗೂ 25 ಗ್ರಾಂ ಚಿನ್ನದ ಪದಕ. ಸುವರ್ಣ ಸಂಭ್ರಮ ಪ್ರಶಸ್ತಿಯ ಮೊತ್ತ 50,000 ಹಾಗೂ ಪ್ರಶಸ್ತಿ ಫಲಕ ಹೊಂದಿದೆ ಎಂದು ಸಚಿವರು ವಿವರಿಸಿದರು.
—