ಶಿವಮೊಗ್ಗ: ಶಿವಮೊಗ್ಗ ನಗರದ ಸಿಮ್ಸ್ ಮೆಡಿಕಲ್ ಕಾಲೇಜಿನ ಸುತ್ತಲಿನ ಪ್ರದೇಶದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿರುವ ವಿರುದ್ದ ದಾಳಿ ನಡೆಯಿತು.
ಒಟ್ಟು 12 ಪ್ರಕರಣಗಳನ್ನು ದಾಖಲಿಸಿ, 2500 ರೂ ದಂಡವನ್ನು ಸಂಗ್ರಹಿಸಲಾಯಿತು. ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತರಾದ ರವಿರಾಜ್, ಮಹಾನಗರ ಪಾಲಿಕೆಯ ನಿರೀಕ್ಷಣಾ ಅಧಿಕಾರಿಗಳಾದ ವಿಕಾಸ್, ಮಹಾನಗರಪಾಲಿಕೆ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಂಬಾಕು ಮಾರಾಟಗಾರರಿಗೆ ಕಾನೂನುಗಳ ಕುರಿತು ಅರಿವು ಮೂಡಿಸಲಾಯಿತು.