Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ದಾವಣಗೆರೆ ವಿಶೇಷ»ನಮನ ಅಕಾಡೆಮಿಯಿಂದ ಇಂಡೋ ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ
ದಾವಣಗೆರೆ ವಿಶೇಷ

ನಮನ ಅಕಾಡೆಮಿಯಿಂದ ಇಂಡೋ ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

davangerevijaya.comBy davangerevijaya.com21 May 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ.ಮೇ.೨೧; ನಮನ ಅಕಾಡೆಮಿ ವತಿಯಿಂದ ಶ್ರೀಲಂಕಾದ ಬೆಸಿಲಿಕ ಸ್ಪೋರ್ಟ್ಸ್ ಅಂಡ್ ಲೀಜರ್ ಅಕಾಡೆಮಿಯೊಂದಿಗೆ ಜಂಟಿಯಾಗಿ ಇಂಡೋ ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಮೇ 24ರ ಸಂಜೆ 6 ಗಂಟೆಯಿಂದ ನಗರದ ಬಿಐಇಟಿ ಕಾಲೇಜಿನ ಎಸ್ ಎಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಉಪಾಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಅಂತರರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಶ್ರೀಲಂಕಾದ ಶ್ರೀ ಮಾಲಿ ಡ್ಯಾನ್ಸಿಂಗ್ ಅಕಾಡೆಮಿಯ 20 ಜನ ನೃತ್ಯ ಕಲಾವಿದರು ಅವರ ಗುರುಗಳಾದ ಮರಿನಿ ಪೆರೇರ ಹಾಗೂ ಹಿಮಾಲಿ ಉಪೇಕ್ಷ ಜಯತಿಲಕ ಮಾರ್ಗದರ್ಶನದಲ್ಲಿ ತಮ್ಮ ದೇಶದ ವಿವಿಧ ನೃತ್ಯ ಪ್ರಕಾರಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ   ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಡಾ. ಎಂ ಜಿ ಈಶ್ವರಪ್ಪ, ಶ್ರೀಲಂಕದ ಬೆಸಿಲಿಕ ಸ್ಪೋರ್ಟ್ಸ್ ಅಂಡ್ ಲೀಜರ್ ಅಕಾಡೆಮಿ ಅಧ್ಯಕ್ಷರಾದ  ರೋಷನ್ ಸಿಲ್ವಾ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಕಲಾವಿದರಾದ ಡಾ. ಹೆಚ್ ಬಿ ಮಂಜುನಾಥ ಅವರಿಗೆ ‘ನಮನ ಶ್ರೀ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮನ ಅಕಾಡೆಮಿಯ ಅಧ್ಯಕ್ಷರಾದ  ಗೋಪಾಲಕೃಷ್ಣ ಕೆ ಎನ್  ವಹಿಸಿಕೊಳ್ಳಲಿದ್ದಾರೆ.ಈ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಶ್ರೀಲಂಕಾ ತಂಡದೊಂದಿಗೆ ದಾವಣಗೆರೆಯ ನಮನ ಅಕಾಡೆಮಿ, ಹರಿಹರದ ಸಂಕರ್ಷಣ ಭರತನಾಟ್ಯಶಾಲೆ, ರಾಣೇಬೆನ್ನೂರಿನ ಶ್ರೀ ಶಾರದಾ ನೃತ್ಯಲಯ, ಶ್ರೀ ಮಾರ್ತಾಂಡ ನೃತ್ಯ ಮತ್ತು ಸಂಗೀತ ಕಲಾ ಸಂಸ್ಥೆಯ ಕಲಾವಿದರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಇದರೊಂದಿಗೆ ದಾವಣಗೆರೆಯ ಗಾನ ಲಹರಿ ತಂಡದ ಕಲಾವಿದರು ಹಾಡುಗಳನ್ನು ಹಾಡಲಿದ್ದಾರೆ. ಈ ಒಂದು ವಿಶೇಷ ಕಾರ್ಯಕ್ರಮದ ಪೂರ್ಣ ಉಸ್ತುವಾರಿಯನ್ನು ನಮನ ಅಕಾಡೆಮಿಯ ಕಾರ್ಯದರ್ಶಿ ಹಾಗೂ ನೃತ್ಯ ಗುರುಗಳಾದ ಗುರು ವಿದುಷಿ ಶ್ರೀಮತಿ ಮಾಧವಿ ಡಿ ಕೆ  ನಿರ್ವಹಿಸಲಿದ್ದಾರೆಂದರು. ನಮನ ಅಕಾಡೆಮಿ ಆಯೋಜಿಸುತ್ತಿರುವ ಎರಡನೇ ಅಂತರರಾಷ್ಟ್ರೀಯ ಕಾರ್ಯಕ್ರಮವಾಗಿದೆ, 2023 ರಲ್ಲಿ ವಿಯೆಟ್ನಾಂ ದೇಶದಲ್ಲಿ ವಿಯೆಟ್ನಾಂನ ವಿ ಯೋಗ ಒಕ್ಕೂಟ, ದಾವಣಗೆರೆಯ ಅವಿಯ ಯೋಗ ಅಕಾಡೆಮಿ ಹಾಗೂ ನಮನ ಅಕಾಡೆಮಿ ಜಂಟಿಯಾಗಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗಾಸನ ಸ್ಪರ್ಧೆ, ಪ್ರತಿಭಾ ಪ್ರದರ್ಶನ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಜಂಟಿಯಾಗಿ ಸಂಘಟಿಸಲಾಗಿತ್ತು ಎಂದು‌ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ಕೆ.ಎನ್ ಗೋಪಾಲ ಕೃಷ್ಣ,ಗುರುಗಳಾದ ಮಾಧವಿ ಡಿ.ಕೆ,ನಾಗಭೂಷಣ್,ಕಿರಣ್ ಉಪಸ್ಥಿತರಿದ್ದರು

ಇಂಡೋ ಶ್ರೀಲಂಕಾ ಕಾರ್ಯಕ್ರಮ ದಾವಣಗೆರೆ ಸಂಸ್ಕೃತಿ
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ

28 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.