ರಾಜ್ಯ ಸಹಕಾರಿ ಸಮಾವೇಶ; ‘ಹಾಸನದ ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ
ದಾವಣಗೆರೆ:
ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂದಿರದಲ್ಲಿ ರಾಜ್ಯ ಸಹಕಾರಿ ಸಮಾವೇಶವನ್ನು ನ.22ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಭಾರತಿಯ ಕಾರ್ಯಾಧ್ಯಕ್ಷ ಎಂ.ಆರ್. ಪ್ರಭುದೇವ್ ತಿಳಿಸಿದರು.
‘ಹಾಸನದ ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಗೋವಿಂದ ಕಾರಜೋಳ ಸಮಾವೇಶ ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ದೀನನಾಥ್ ಠಾಕೂರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಉದಯ ವಾಸುದೇವ್ ಜೋಶಿ, ಜಿ.ನಂಜನಗೌಡ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸಹಕಾರ ಭಾರತಿಯ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎನ್.ಸ್ವಾಮಿ, ಪ್ರಧಾನ ಕಾರ್ಯದರ್ಶಿ ರವಿ, ಮುರುಗೇಶ್, ಪಾಲಿಕೆ ಸದಸ್ಯ ಎಸ್.ಟಿ.ವೀರೇಶ್, ಮುಖಂಡರಾದ ಬಿ.ಶೇಖರಪ್ಪ, ಪರಶುರಾಮಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು