Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಾವು ಸಿದ್ದರಿಲ್ಲ: ಕೃಷ್ಣ ಬೈರೇಗೌಡ
ಪ್ರಮುಖ ಸುದ್ದಿ

ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಾವು ಸಿದ್ದರಿಲ್ಲ: ಕೃಷ್ಣ ಬೈರೇಗೌಡ

davangerevijaya.comBy davangerevijaya.com14 December 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

*ಮುರುಡೇಶ್ವರದಲ್ಲಿ ದುರಂತ ಸಾವಿಗೀಡಾದ ವಿದ್ಯಾರ್ಥಿನಿಯರ ಪ್ರಕರಣ, *ಮುಳಬಾಗಿಲು ಶಾಸಕರಿಗೆ ಸದನದಲ್ಲಿ ಉತ್ತರಿಸಿದ ಕೃಷ್ಣ ಬೈರೇಗೌಡರು. *ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ.

ಬೆಳಗಾವಿ.

ಪ್ರವಾಸಕ್ಕೆ ತೆರಳಿದ್ದ ವೇಳೆ ಭಟ್ಕಳ ತಾಲೂಕು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿರುವುದು ವಿಷಾದದ ಸಂಗತಿ. ಹಾಗೆಂದು ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಮ್ಮ ಸರ್ಕಾರ ಸಿದ್ದವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಸ್ಪಷ್ಟಪಡಿಸಿದರು.

ಶುಕ್ರವಾರ ವಿಧಾನಸಭೆ ಶೂನ್ಯ ವೇಳೆ ಚರ್ಚೆಯಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಮುರುಡೇಶ್ವರದಲ್ಲಿ ದುರಂತ ಸಾವಿಗೀಡಾದ ವಿದ್ಯಾರ್ಥಿನಿಯರ ಪ್ರಕರಣವನ್ನು ಉಲ್ಲೇಖಿಸಿದ್ದರು. ಹೆಚ್ಚಿನ ಜನ ಪ್ರವಾಸಕ್ಕೆ ಆಗಮಿಸುವ ಸ್ಥಳದಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು. ತಮ್ಮದೇ ಕ್ಷೇತ್ರದ ವಿದ್ಯಾರ್ಥಿನಿಯರ ದುರಂತ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು.

ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಅವರಿಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಮುಳಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಕ್ಕಳ ಜೊತೆ ಏಳು ಜನ ಶಿಕ್ಷಕರೂ ಪ್ರವಾಸಕ್ಕೆ ತೆರಳಿದ್ದಾರೆ.

ಪ್ರವಾಸದ ವೇಳೆ ಮಕ್ಕಳ ರಕ್ಷಣೆ ಶಿಕ್ಷಕರ ಜವಾಬ್ದಾರಿ. ಮಕ್ಕಳು ಸಮುದ್ರದ ಆಳವಾದ ಸ್ಥಳಕ್ಕೆ ಈಜಲು ತೆರಳಿದ್ದಾಗ ಶಿಕ್ಷಕರು ಕೂಡಲೇ ಅದನ್ನು ತಡೆಯಬೇಕಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲಿ ಶಿಕ್ಷಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದರು.

ಮುಂದುವರೆದು, “ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವ ಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಮ್ಮ ಸರ್ಕಾರ ಸಿದ್ದವಿಲ್ಲ. ಹೀಗಾಗಿ ನಿರ್ಲಕ್ಷ್ಯ ವಹಿಸಿದ್ದ ಶಿಕ್ಷಕರನ್ನು ಈಗಾಗಲೇ ಅಮಾನತು ಮಾಡಲಾಗಿದೆ., ಹೆಚ್ಚಿನ ಜನ ಪ್ರವಾಸಕ್ಕೆ ಆಗಮಿಸುವ ಸ್ಥಳಕ್ಕೆ ಮತ್ತಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂಬ ಸಮೃದ್ಧಿ ಮಂಜುನಾಥ್ ಅವರ ಸಲಹೆಯನ್ನೂ ಸ್ವೀಕರಿಸಲಾಗುವುದು. ಅಲ್ಲದೆ, ಈ ದುರಂತದ ಬಗ್ಗೆ ಶೀಘ್ರ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಸದನಕ್ಕೆ ಭರವಸೆ ನೀಡಿದರು.

ಏನಿದು ಪ್ರಕರಣ ?

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲಾ ಮಕ್ಕಳನ್ನು ಕಳೆದ ಡಿಸೆಂಬರ್ 10 ರಂದು ಶಿಕ್ಷಕರು ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಕ್ಕೆಂದು ಕರೆತಂದಿದ್ದರು. ಆದರೆ, ಸಮುದ್ರದ ಆಳವಾದ ಭಾಗದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿ ಮೃತಪಟ್ಟಿದ್ದರು.

ದುರಂತದಲ್ಲಿ ವಿದ್ಯಾರ್ಥಿನಿಯರಾದ ದೀಕ್ಷಾ ಜೆ(15), ಲಾವಣ್ಯ (15) ವಂದನಾ (15) ಹಾಗೂ ಶ್ರಾವಂತಿ ಗೋಪಾಲಪ್ಪ (15) ಮೃತರಾಗಿದ್ದು. ವಿದ್ಯಾರ್ಥಿನಿಯರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಘೋಷಿಸಿದ್ದಾರೆ.

feauchre Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.