ಬೆಂಗಳೂರು : ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯಪದಗಳಿಂದ ನಿಂದಿಸಿದ್ದ ಮಾಜಿ ಸಚಿವ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಸೂಚಿಸಿದೆ. ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ಜಿ ಉಮಾ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಸಿಟಿ ರವಿ ಬಿಡುಗಡೆಗೆ ಆದೇಶ ಹೊರಡಿಸಿದರು.
ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರ ಪರವಾಗಿ ಸಂದೇಶ ಚೌಟ ವಾದ ಮಂಡಿಸಿದರು. ಅರೆಸ್ಟ್ನ್ನೇ ನಾವು ಪ್ರಶ್ನಿಸಿದ್ದೇವೆ. ಬಂಧನವೇ ಕಾನೂನು ಬಾಹಿರವಾದರೆ ತಕ್ಷಣ ಬಿಡುಗಡೆ ಮಾಡಬೇಕು. ಸೆಕ್ಷನ್ 75 ಮತ್ತು 79 ರ ಅಡಿ ಕೇಸ್ ದಾಖಲಾಗಿದೆ. ಆರೋಪಿ ಹಾಗೂ ದೂರುದಾರ ಇಬ್ಬರು ಶಾಸಕರು ಎಂದು ಸಂದೇಶ್ ಚೌಟ ವಾದಿಸಿದ್ದರು. ವಾದ ಅಂತ್ಯವಾದ ಬಳಿಕ ಹೈ ಕೋರ್ಟ್ ನ ನ್ಯಾಯಮೂರ್ತಿ ಎಂ. ಜೆ ಉಮಾ ಅವರು ಆದೇಶವನ್ನು ಪ್ರಕಟಿಸುವ ವೇಳೆ, ಫಿರ್ಯಾದಿಯನ್ನು ಅಸಂವಿಧಾನದ ಪದದಿಂದ ಸಂಬೋಧಿಸಿದ್ದಾರೆಂದು ಆರೋಪ ಮಾಡಿದ್ದಾರೆ. ಹಾಗಾಗಿ ತಕ್ಷಣ ಆರೋಪಿ ಸಿಟಿ ರವಿಯನ್ನು ಬಂಧಿಸಲಾಗಿದೆ. ಗರಿಷ್ಠ ಶಿಕ್ಷೆ 1 ವರ್ಷ ಮತ್ತು 3 ವರ್ಷ ಮಾತ್ರವಿದೆ. ಅಥವಾ ದಂಡ ವಿಧಿಸಲು ಅವಕಾಶವಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ಇದ್ದರೆ 41 ಎ ಅಡಿ ನೋಟಿಸ್ ನೀಡಬೇಕು. 6ನೇ ಸುಕುಮಾರ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಈ ಬಗ್ಗೆ ತೀರ್ಪು ನೀಡಿದೆ. ನೋಟಿಸ್ ನೀಡಿಲ್ಲವೆಂಬುದನ್ನು ಎಸ್ಪಿಪಿ ನಿರಾಕರಿಸಿದ್ದಾರೆ. ಆದರೆ ಇದಕ್ಕೆ ಪೂರಕವಾಗಿ ಯಾವುದೇ ದಾಖಲೆಯನ್ನು ಸಲ್ಲಿಸಿಲ್ಲ. ಬಂಧನವೇ ಕಾನೂನು ಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ. ಹೀಗಾಗಿ ತಕ್ಷಣ ರಿಲೀಸ್ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ನ್ಯಾಯಮೂರ್ತಿ ಹೇಳಿದರು.
ಆರೋಪಿ ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಹೀಗಾಗಿ ಬಿಡುಗಡೆಗೆ ಆದೇಶಿಸಬಾರದೆಂದು ಎಸ್ಪಿಪಿ ಬೆಳ್ಳಿಯಪ್ಪ ವಾದಿಸಿದ್ದರು. ಆರೋಪಿ ಮತ್ತು ಫಿರ್ಯಾದಿ ಇಬ್ಬರೂ ಕೂಡ ಶಾಸಕರಾಗಿದ್ದಾರೆ. ಪರಿಷತ್ ನಲ್ಲಿ ಈ ರೀತಿ ಘಟನೆ ನಡೆದಿರುವುದು ದುರದೃಷ್ಟಕರ. ಈ ವೇಳೆ ಸಂದೇಶ್ ಚೌಟ, ಆರೋಪಗಳಿಗೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆ ಇದೆ. 41ಂ ಅಡಿ ನೋಟಿಸ್ ನೀಡಬೇಕಿತ್ತು. ಪೋಲಿಸ್ ಬಂಧನಕ್ಕೆ ಕಾರಣಗಳನ್ನು ನೀಡಬೇಕಿತ್ತು, ಆದರೆ ಇದನ್ನು ನೀಡಿರುವ ಬಗ್ಗೆ ದಾಖಲೆಗಳನ್ನು ಒದಗಿಸಿಲ್ಲ ಎಂದು ಪ್ರತಿವಾದಿಸಿದ್ದರು. ಅಲ್ಲದೇ ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯಗಳಾಗಿವೆ ಎಂದು ಸಿಟಿ ರವಿ ವಕೀಲರು ಹೀಗೆ ವಾದಿಸಿದ್ದಾರೆ.
ಚಿಕಿತ್ಸೆಯ ವಿವರವನ್ನು ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಆದರೆ ಸ್ಕ್ಯಾನಿಂಗ್ ಮಾಡಿಸಿರುವುದಾಗಿ ವರದಿ ಇದೆ. ಏನನ್ನು ರೆಕಾರ್ಡ್ ಮಾಡಿಲ್ಲವೆಂದು ಸಭಾಪತಿ ಹೇಳಿಕೆ ನೀಡಿದ್ದಾರೆ. ಸಿಟಿ ರವಿಯನ್ನು ಬಂಧಿಸುವಾಗ ಹಲ್ಲೆ ನಡೆಸುವ ಅಗತ್ಯವಿರಲಿಲ್ಲ. ಕಾನೂನು ಕ್ರಮ ಪಾಲಿಸಿ ಕ್ರಮ ಕೈಗೊಳ್ಳಬಹುದಾಗಿತ್ತು ಎಂದು ಕೋರ್ಟ್ ಹೇಳಿದ್ದು, ಸಿಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ ಹೊರಡಿಸಿತು.
ಜನಪ್ರತಿನಿಧಿಗಳ ಕೋರ್ಟ್ನಲ್ಲಿ ವಿಚಾರಣೆ ಮುಂದೂಡಿಕೆ
ಸಿಟಿ ರವಿ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಕೂಡ ನಡೆಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಪ್ರಕರಣದಕ್ಕೆ ಸಂಬAಧಿಸಿದAತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ಅರ್ಜಿ ವಿಚಾರಣೆಯನ್ನು ನಾಳೆಗೆ (ಡಿಸೆಂಬರ್ 21) ಮುಂದೂಡಿತ್ತು.
ಸರಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ
ಸಿ.ಟಿ. ರವಿ ಬಂಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಮಾಡಿದೆ, ಸಿ.ಟಿ. ರವಿ ಮೇಲೆ ದೌರ್ಜನ್ಯವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರ ಹೇಗೆ ದುರುಪಯೋಗ ಮಾಡಿದೆ ಅನ್ನೋದನ್ನ ನೋಡ್ತಿದ್ದೇವೆ ಅಂತ ಕಿಡಿಕಾರಿದ್ರು. ರೈತರ ಮೇಲೆ ಲಾಠಿ ಚಾರ್ಜ್, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ. ಇದೀಗ ವಿಧಾನಸೌಧದ ಒಳಗೆ ಬಂದು ಸಿಟಿ ರವಿ ಮೇಲೆ ಹಲ್ಲೆ ಮಾಡ್ತಾರೆ. ಅದಕ್ಕೆ ಅವಕಾಶವನ್ನ ಕೊಡ್ತಾರೆ ಅಂತ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ.ಟಿ.ರವಿಗೆ ರಕ್ತ ಬಂದರೂ ಆಸ್ಪತ್ರೆಗೆ ಸೇರಿಸಿಲ್ಲ
ಸಿ.ಟಿ. ರವಿಯನ್ನು 500 ಕಿಮಿ ಸುತ್ತಿಸಿದ್ದಾರೆ. ಇದು ಹಿಟ್ಲರ್ ಸರ್ಕಾರವೋ? ಕಾಂಗ್ರೆಸ್ ಸರ್ಕಾರವೋ ಅಂತ ವಿಜಯೇಂದ್ರ ಪ್ರಶ್ನಿಸಿದ್ರು. ತುರ್ತು ಪರಿಸ್ಥಿತಿ ಹೇರಿರುವ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ನೆತ್ತಿಯ ಮೇಲೆ ರಕ್ತ ಬಂದ್ರೂ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ ಅಂತ ಆರೋಪಿಸಿದ್ರು. ಸಿದ್ದರಾಮಯ್ಯನವರೇ, ಅಧಿಕಾರ ಶಾಶ್ವತವಲ್ಲ. ಅಧಿಕಾರದ ಮದದಿಂದ ಹಲ್ಲೆ ಮಾಡುವ ಕೆಲಸ ಮಾಡ್ತಿದ್ದಾರೆ. ಪ್ರತಿ ಅರ್ಧಗಂಟೆಗೆ ಕರೆ ಮಾಡಿ ಯಾರೋ ಸೂಚನೆ ಕೊಡ್ತಿದ್ರು ಎಂದು ಸಿಟಿ ರವಿ ಹೇಳಿದ್ದಾರೆ. ಸಿಟಿ ರವಿ ಉಗ್ರಗಾಮಿಯಾ? ಟೆರರಿಸ್ಟಾ? ಅಂತ ವಿಜಯೇಂದ್ರ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.