Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ಯತ್ನಾಳ್ ಹೊಸ ಪಕ್ಷ ಕಟ್ಟುವುದಿಲ್ಲ , ಕಟ್ಟಿದರೂ ನಾವು ಹೋಗೋದಿಲ್ಲ : ಜಿ.ಎಂ.ಸಿದ್ದೇಶ್ವರ, ಶಾಸಕ ಹರೀಶ್
ಕ್ರೈಂ ಸುದ್ದಿ

ಯತ್ನಾಳ್ ಹೊಸ ಪಕ್ಷ ಕಟ್ಟುವುದಿಲ್ಲ , ಕಟ್ಟಿದರೂ ನಾವು ಹೋಗೋದಿಲ್ಲ : ಜಿ.ಎಂ.ಸಿದ್ದೇಶ್ವರ, ಶಾಸಕ ಹರೀಶ್

ಜಿ.ಎಂ.ಸಿದ್ದೇಶ್ವರ್, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ ಮಾಧ್ಯಮಗಳ ಸೃಷ್ಟಿ ಅಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅವರು ಹೊಸ ಪಕ್ಷ ಕಟ್ಟುವುದಾಗಿ ಎಲ್ಲೂ ಹೇಳಿಲ್ಲ
davangerevijaya.comBy davangerevijaya.com6 April 2025No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವುದಿಲ್ಲ. ಒಂದು ವೇಳೆ ಕಟ್ಟಿದರೆ ನಾವು ಯಾರೂ ಅವರೊಂದಿಗೆ ಹೋಗುವುದಿಲ್ಲ ಎಂದು ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಮತ್ತು ಹರಿಹರ ಶಾಸಕ ಬಿ.ಪಿ.ಹರೀಶ್ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಶನಿವಾರ ಸಂಜೆ ಜಿಎಂಐಟಿ ಅತಿಥಿ ಗೃಹದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿ.ಎಂ.ಸಿದ್ದೇಶ್ವರ್, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ ಮಾಧ್ಯಮಗಳ ಸೃಷ್ಟಿ ಅಷ್ಟೇ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅವರು ಹೊಸ ಪಕ್ಷ ಕಟ್ಟುವುದಾಗಿ ಎಲ್ಲೂ ಹೇಳಿಲ್ಲ. ಅವರ ಉಚ್ಛಾಟನೆ ನಂತರ ಬೆಂಗಳೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೂ ಈ ಬಗ್ಗೆ ಯಾವುದೇ ಪ್ರಸ್ತಾಪಗಳು ನಡೆದಿಲ್ಲ ಎಂದು ತಿಳಿಸಿದರು.

ಯತ್ನಾಳ್ ಈಗಲೂ ನಮ್ಮ ನಾಯಕರೆ

ಯತ್ನಾಳ್ ಈಗಲೂ ನಮ್ಮ ನಾಯಕರೇ. ನಮ್ಮ ನಾಯಕರು ಅಷ್ಟೇ ಅಲ್ಲ. ಉತ್ತರ ಕರ್ನಾಟಕ ಭಾಗದ ದೊಡ್ಡ ನಾಯಕ, ಹಿಂದೂಹುಲಿ, ಅಂಥಹ ನಾಯಕನನ್ನು ಬಿಜೆಪಿಯಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಉತ್ತರ ಕರ್ನಾಟಕ ಭಾಗಕ್ಕೆ ಅವರ ಅವಶ್ಯಕತೆ ಇದೆ. 2028 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳಿಸಲು ಅವರು ಪಕ್ಷಕ್ಕೆ ಅನಿವಾರ್ಯ. ಹಾಗಾಗಿ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಸಂಬAಧ ರಾಷ್ಟಿçÃಯ ನಾಯಕರೊಂದಿಗೆ ಮಾತುಕತೆಗಳು ನಡೆಯುತ್ತಿವೆ ಎಂದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬದಲಾವಣೆಯಾಗುತ್ತದೆಯೇ ಎಂದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಕಾದು ನೋಡಿ ಎಂದ ಸಿದ್ದೇಶ್, ಬೆಂಗಳೂರಿನಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರ ನಿಸ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಹೊಸ ಪಕ್ಷ ಕಟ್ಟಲು ನಾವು ಬಿಡುವುದಿಲ್ಲ. ಒಂದು ವೇಳೆ ಕಟ್ಟಿದರೆ ನಾವು ಅವರೊಂದಿಗೆ ಹೋಗದೇ ಬಿಜೆಪಿಯಲ್ಲಿಯೇ ಇರುತ್ತೇವೆ. ಶೀಘ್ರವೇ ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳು ಬಗೆಹರಿಯಲಿವೆ. ಮುಂದಿನ 15 ದಿನಗಳಲ್ಲಿ ರಾಷ್ಟ್ರೀಯಬಿಜೆಪಿ ಅಧ್ಯಕ್ಷ ಗಾದಿಗೆ ಹೊಸಬರ ಆಯ್ಕೆ ನಡೆಯಲಿದ್ದು, ನಂತರ ಎಲ್ಲ ರಾಜ್ಯಗಳ ಅಧ್ಯಕ್ಷರ ಆಯ್ಕೆಯಾಗಲಿದ್ದಾರೆ. ಆಗ ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದರು.

ಪಕ್ಷದ ಶಿಸ್ತು ಸಮಿತಿಯಿಂದ ನನಗೂ ನೋಟಿಸ್ ಬಂದಿತ್ತು. ಈಗಾಗಲೇ ಅದಕ್ಕೆ ಉತ್ತರಿಸಿದ್ದೇನೆ. ಲೋಕಸಭಾ ಚುಣಾವಣೆ ವೇಳೆ ದಾವಣಗೆರೆ ಕ್ಷೇತ್ರದಲ್ಲಿ ನಡೆದಿರುವ ಒಳ ಒಪ್ಪಂದ ಕುರಿತ ನನ್ನ ಹೇಳಿಕೆ ಬಗ್ಗೆ ನೋಟಿಸಿಗೆ ಸಮಜಾಯಿಷಿ ನೀಡಿದ್ದೇನೆ. ಈ ವಿಚಾರದಲ್ಲಿ ಹಿಂದೆ, ಮುಂದೆ ಯಾವ ಕಾಲದಲ್ಲಿಯೂ ನನ್ನ ಉತ್ತರ ಒಂದೇ ಆಗಿರುತ್ತದೆ ಎಂದು ಬಿ.ಪಿ.ಹರೀಶ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ದಾವಣಗೆರೆ ವಿಶ್ವ ವಿದ್ಯಾನಿಲಯದಿಂದ ನಮ್ಮ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌ರಿಗೆ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ದಾವಿವಿ ಗೌರವ ಡಾಕ್ಟರೇಟ್ ನೀಡಿದ್ದಕ್ಕೆ ಗೌರವ ಡಾಕ್ಟರೇಟ್ ಪುರಸ್ಕೃತ ರವೀಂದ್ರನಾಥ್‌ರಿಗೆ, ದಾವಿವಿಗೆ ಹಾಗೂ ಪಕ್ಷಾತೀತವಾಗಿ ಸಾಧನೆಯನ್ನು ಗುರುತಿಸಿ, ಗೌರವ ಡಾಕ್ಟರೇಟ್ ಕೊಡಲು ಕಾರಣವಾದ ರಾಜ್ಯ ಸರ್ಕಾರಕ್ಕೂ ಅಭಿನಂದಿಸುತ್ತೇನೆ ಎಂದು ಬಿ.ಪಿ.ಹರೀಶ ಮಾರ್ಮಿಕವಾಗಿ ತಿಳಿಸಿದರು.

ಹನಿಟ್ರ್ಯಾಪ್ ಗೆ ರಾಷ್ಟ್ರೀಯ ನಾಯಕರು

ಹನಿಟ್ರಾö್ಯಪ್ ಪ್ರಯತ್ನ ಸಂಬಂಧ ಸಚಿವರೊಬ್ಬರು ಸದನದಲ್ಲಿಯೇ ಪ್ರಸ್ತಾಪ ಮಾಡಿದರು. ಆ ಸಚಿವರು ದೂರು ಕೊಡುವ ತನಕ ಕಾಯದೇ ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಬೇಕಿತ್ತು. ಸಚಿವರೇ ಹೇಳಿರುವಂತೆ ಹನಿಟ್ರಾö್ಯಪ್‌ಗೆ ಒಳಗಾಗಿರುವ 48 ಜನರಲ್ಲಿ ಕಾಂಗ್ರೆಸ್‌ನ ರಾಷ್ಟಿçÃಯ ನಾಯಕರೊಬ್ಬರು ಇದ್ದಾರಾ ಎಂಬ ಅನುಮಾನನಮ್ಮನ್ನು ಕಾಡುತ್ತಿದೆ. ಏಕೆಂದರೆ ಸಚಿವರ ಈ ಹೇಳಿಕೆ ಬೆನ್ನಲ್ಲಿಯೇ ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಿಎಂ ಮನೆಗೆ ಬಂದು ಸಿಟ್ಟಾದರು. ತದನಂತರ ಈ ವಿಚಾರ ಬೇರೆ ಸ್ವರೂಪ ಪಡೆದುಕೊಳ್ಳುತ್ತದೆ. ಹನಿಟ್ರಾಪ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ತಪ್ಪುಗಳನ್ನು ಮಾಡುತ್ತಿದ್ದಾರೆ ಎಂದು ಶಾಸಕ ಬಿ.ಪಿ.ಹರೀಶ್ ಆರೋಪಿಸಿದರು.

ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಎರಡೂ ಸದನದಲ್ಲಿ ಅಂಗೀಕಾರವಾಗಿದೆ. ರಾಜ್ಯದಲ್ಲಿ ವಕ್ಫ್ ವಿರುದ್ಧ ಮೊದಲು ಧ್ವನಿ ಎತ್ತಿ, ದಾಖಲೆಗಳನ್ನು ಕೊಟ್ಟಿದ್ದೇ ಬಸನಗೌಡ ಪಾಟೀಲ್ ಯತ್ನಾಳ. ವಕ್ಫ್ ಬಗ್ಗೆ ಅನ್ವರ್ ಮಾಣಿಪ್ಪಾಡಿ, ಶಾಸಕ ಬಸನಗೌಡ ಪಾಟೀಲರು ಧ್ವನಿ ಎತ್ತಿದ್ದರಿಂದಲೇ ಕೇಂದ್ರ ಸರ್ಕಾರವು ಇಂದು ಸಮರ್ಥವಾಗಿ ಮಸೂದೆ ಮಂಡಿಸಿ, ಅಂಗೀಕರಿಸುವುದಕ್ಕೆ ಸಾಧ್ಯವಾಗಿದೆ. ಸ್ವತಃ ಕೇಂದ್ರ ಸಚಿವ ಅಮಿತ್ ಶಾ ವಿಜಯಪುರದ ಸಾವಿರಾರು ಎಕರೆ ಜಾಗ ವಕ್ಫ್ ಕಬಳಿಸಲು ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಯತ್ನಾಳರ ಪರಿಶ್ರಮದ ಬಗ್ಗೆ ಕೇಂದ್ರ ನಾಯಕರ ಗಮನಕ್ಕೂ ತರುತ್ತೇವೆ ಎಂದು ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ದೂಡಾ ಮಾಜಿ ಅಧ್ಯಕ್ಷರಾದ ಯಶವಂತರವ್ ಜಾದವ್, ದೇವರನಿ ಶಿವಕುಮಾರ್. ರಾಜನಹಳ್ಳಿ ಶಿವಕುಮಾರ್, ಪಕ್ಷದ ಮುಖಂಡರಾದ ಬಿ.ಎಸ್.ಜಗದೀಶ್, ಶ್ರೀನಿವಾಸ್ ದಾಸ ಕರಿಯಪ್ಪ, ಅಣಬೇರು ಜೀವನಮೂರ್ತಿ, ವೀರೇಶ್ ಹನಗವಾಡಿ ಇತರರು ಉಪಸ್ಥಿತರಿದ್ದರು

even if it is formed Featured MLA Harish ... topnews we will not go: G.M. Siddeshwar Yatnal will not form a new party
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.