ದಾವಣಗೆರೆ: ವೀರಶೈವ ಒಳ ಪಂಗಡಗಳು ಒಂದಾದಾಗ ಮಾತ್ರ ಸರ್ಕಾರವನ್ನೆ ವೀರಶೈವ ಸಮುದಾಯ ನಡೆಸುತ್ತದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಆರಂಭಗೊಂಡ ಎರಡು ದಿನಗಳ ಮಹಾಧಿವೇಶನದಲ್ಲಿ ಭಾಗವಹಿಸಿ ಮಾತನಾಡಿ, ನಾವು ಜಾತಿಗಣತಿ ವಿರೋಧಿಗಳಲ್ಲ.
ವೀರಶೈವ ಸಮುದಾಯ ಕೇಂದ್ರದ ಒಬಿಸಿ ಪಟ್ಟಿಗೆ ಸೇರಬೇಕು ಎಂಬ ಒತ್ತಾಯವಿದೆ. ಜಾತಿಗಣತಿಯನ್ನು ನಾವು ಒಪ್ಪುವುದಿಲ್ಲ.ಕರ್ನಾಟಕದಲ್ಲಿ ಒಂದೂವರೆ ಕೋಟಿಗೂ ಅಧಿಕ ಲಿಂಗಾಯತ ಸಮುದಾಯದವರು ಇದ್ದಾರೆ. ವೀರಶೈವ ಸಮಾಜದ ಸಂಖ್ಯೆಯನ್ನು ಕಡಿಮೆ ತೋರಿಸಿ, ಯಾರಾದರೂ ಲಾಭ ಮಾಡಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಅವರ ಹಗಲು ಕನಸು.
ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ತೆಗೆದುಕೊಳ್ಳುವ ನಿರ್ಣಯಗಳಿಗೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.