ನಂದೀಶ್ ಭದ್ರಾವತಿ ದಾವಣಗೆರೆ
ಲೋಕಸಭೆ ಚುನಾವಣೆ ಅಖಾಡ ರಂಗೇರಿದ್ದು, ಬಿಜೆಪಿ ಹೈಕಮಾಂಡ್ ಬಹುತೇಕ 18 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿದೆ. ಆದರೆ ಈ ಪಟ್ಟಿ ಇಂದು ಅಥವಾ ನಾಳೆ ಬಹುತೇಕ ಬಿಡುಗಡೆಗೊಳ್ಳಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಟಿಕೆಟ್ ಫೈನಲ್ ಗಾಗಿ ಸೋಮವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಒಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಿರುಸಿನ ಚರ್ಚೆ ನಡೆದಿತ್ತು.ಈಗಾಗಲೇ ಮೊದಲೇ ಪಟ್ಟಿ ಬಿಡುಗಡೆಗೊಂಡಿದ್ದು, ಎರಡನೇ ಪಟ್ಟಿಯಲ್ಲಿ ಬಹುತೇಕ ಅಚ್ಚರಿ ಹೆಸರುಗಳು ಪ್ರಕಟಹೊಳ್ಳಲಿವೆ..ಈ ಬಾರಿ ಕೆಲ ಹಾಲಿ ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಇದೆ.
ಕಗ್ಗಂಟಾದ ಕ್ಷೇತ್ರಗಳು
ಹತ್ತು ಕ್ಷೇತ್ರಗಳು ಕಗ್ಗಾಂಟಾಗಿದ್ದು, ಚುನಾವಣಾ ಸಮಿತಿ ಸಭೆಯಲ್ಲಿ ಮೈಸೂರು, ಉತ್ತರಕನ್ನಡ, ಚಾಮರಾಜನಗರ, ಬೆಂಗಳೂರು ಉತ್ತರ. ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಹಾವೇರಿ, ಬೆಳಗಾವಿ, ಮಂಗಳೂರು, ದಾವಣಗೆರೆ ಕ್ಷೇತ್ರಗಳ ಬಗ್ಗೆ ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಇಲ್ಲಿ ಹೆಚ್ಚು ಆಕಾಂಕ್ಷಿಗಳು ಇರುವ ಕಾರಣ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಮಂಗಳವಾರ ಅಥವಾ ಬುಧವಾರ ಸರಣಿ ಮೀಟಿಂಗ್ ನಡೆಯಲಿದ್ದು, ಇದಾದ ನಂತರ ಫೈನಲ್ ಆಗಬಹುದು.
ಹಾಲಿ ಸಂಸದರಿಗೆ ಕೋಕ್ ಸಾಧ್ಯತೆ
ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉತ್ತರ ಕನ್ನಡ ಅನಂತಕುಮಾರ್ ಹೆಗಡೆ, ಬೀದರ್ ಕ್ಷೇತ್ರದ ಭಗವಂತ್ ಖೂಬಾ, ದಾವಣಗೆರೆಯ ಸಿದ್ದೇಶ್ವರ್, ಚಿಕ್ಕಮಗಳೂರಿನ ಶೋಭಾಗೆ ವಿರೋಧ ವ್ಯಕ್ತವಾದರೂ, ಅವರ ಬೆಂಬಲಕ್ಕೆ ಯಡಿಯೂರಪ್ಪ ನಿಂತಿದ್ದಾರೆ. ಆದ್ದರಿಂದ ಕೆಲ ಹಾಲಿ ಸಂಸದರಿಗೆ ಈ ಬಾರಿ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ತಿಳಿದುಬಂದಿದೆ.
ಹೊಸ ಪ್ರಯೋಗ ಬೇಡ, ಗೆಲುವೆ ಮಾನದಂಡ
ಕೆಲ ಕ್ಷೇತ್ರಗಳಲ್ಲಿ ಪಕ್ಷದ ವರಿಷ್ಠರು ಪ್ರಯೋಗ ನಡೆಸುವ ಮೂಲಕ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದರೆ ಇದಕ್ಕೆ ಮಾಜಿಸಿಎಂ ಬಿಎಸ್ವೈ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಂಚ ರಾಜ್ಯ ಚುನಾವಣೆಯಲ್ಲಿ ಗೆಲುವೇ ಮಾನದಂಡದಂತೆ ಟಿಕೆಟ್ ನೀಡಲಾಗಿದ್ದು ಅದರ ಆಧಾರದ ಮೇಲೆ ಟಿಕೆಟ್ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಬಹುತೇಕ ಇವರಿಗೆ ಟಿಕೆಟ್
1.ಶಿವಮೊಗ್ಗ -ಬಿ.ವೈ.ರಾಘವೇಂದ್ರ2.ಧಾರವಾಡ- ಪ್ರಹ್ಲಾದ್ ಜೋಶಿ3.ಉಡುಪಿ-ಚಿಕ್ಕಮಗಳೂರು- ಶೋಭಾ ಕರಂದ್ಲಾಜೆ4.ವಿಜಯಪುರ- ಗೋವಿಂದ ಕಾರಜೋಳ5.ಬೆಳಗಾವಿ- ಜಗದೀಶ್ ಶೆಟ್ಟರ್ 6.ಹಾವೇರಿ- ಬಸವರಾಜ ಬೊಮ್ಮಾಯಿ7.ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್.ಮಂಜುನಾಥ್8.ಬೆಂಗಳೂರು ಕೇಂದ್ರ- ಪಿ.ಸಿ.ಮೋಹನ್9.ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ10.ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್11.ತುಮಕೂರು- ವಿ.ಸೋಮಣ್ಣ12.ಚಿತ್ರದುರ್ಗ- ಎ.ನಾರಾಯಣಸ್ವಾಮಿ13.ಕಲಬುರಗಿ- ಉಮೇಶ್ ಜಾಧವ್14.ಮೈಸೂರು- ಯದುವೀರ್ ಒಡೆಯರ್15.ಬಳ್ಳಾರಿ- ಬಿ.ಶ್ರೀರಾಮುಲುಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.
ಮಾಜಿ ಸಿಎಂಗಳಿಗೆ ಟಿಕೆಟ್
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಫೈನಲ್ ಆಗಿದೆ. ಶೆಟ್ಟರ್ ಗೆ ಬೆಳಗಾವಿ, ಬೊಮ್ಮಾಯಿಗೆ ಹಾವೇರಿ ಟಿಕೆಟ್ ಸಿಗಲಿದ್ದು ಬಿ.ಸಿ.ಪಾಟೀಲ್ , ಈಶ್ವರಪ್ಪ ಪುತ್ರ ಕಾಂತರಾಜ್ ಗೆ ಟಿಕೆಟ್ ಸಿಗೋದು ಡೌಟ್. ಇನ್ನು ಹಾಲಿ ಸಂಸದರ ಪೈಕಿ ವಿವಾದಾಸ್ಪದ ಹೇಳಿಕೆಗಳನ್ನು ನೀಡುತ್ತಿರುವ ಉತ್ತರ ಕನ್ನಡ ಕ್ಷೇತ್ರದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ನೀಡುವ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ.
ಹಾಲಿ ಸಂಸದರಿಗೆ ಯಾಕೆ ಟಿಕೆಟ್ ಸಿಗುತ್ತಿಲ್ಲ
ದಾವಣಗೆರೆಯಲ್ಲಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಲಾಬಿ ನಡೆಸಲು ದೆಗಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಸಂಸದರ ಕುಟುಂಬಕ್ಕೆ ಟಿಕೆಟ್ ಬೇಡ, ಹೊಸಬರಿಗೆ ಅವಕಾಶ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ. ಆದರೂ ಇಲ್ಲಿ ಮಗ ಅನೀತ್ ಗೆ ಟಿಕೆಟ್ ಸಿಗಬಹುದು. ತುಮಕೂರಿನಲ್ಲಿ ಮಾಜಿ ಸಚಿವ ಮಾಧುಸ್ವಾಮಿ, ಸೋಮಣ್ಣ ನಡುವೆ ಪೈಪೋಟಿ ನಡೆದಿದೆ. ಈ ಮಧ್ಯೆ ಟಿಕೆಟ್ ಗಾಗಿ ಮಾಧುಸ್ವಾಮಿ ಬೆಂಬಲಿಗರು ಹಕ್ಕೊತ್ತಾಯ ಆರಂಭಿಸಿದ್ದಾರೆ. ಬಹಿರಂಗ ಸಭೆಗಳ ಮೂಲಕ ಹಕ್ಕೊತ್ತಾಯ ಮಾಡ್ತಿದ್ದಾರೆ. ಮಾಧುಸ್ವಾಮಿ ಬೆಂಬಲಿಗರು ಸೋಮಣ್ಣ ವಿರುದ್ಧ ಹೊರಗಿನವರು ಎಂಬ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಇನ್ನು ಮೈಸೂರಿನಲ್ಲಿ ಸಂಸ ಪ್ರತಾಪ್ ಸಿಂಹಗೆ ಟಿಕೆಟ್ ಸಿಗೋದು ಕಷ್ಟವಾಗಿದ್ದು ರಾಜಮನೆತನದ ಯದುವೀರ್ ಒಡೆಯರ್ಗೆ ಟಿಕೆಟ್ ಸಿಗಲಿದೆ. ಅಲ್ಲದೇ ಚಿಕ್ಕಬಳ್ಳಾಪುರ ಬಿಜೆಪಿಯಲ್ಲೂ ಟಿಕೆಟ್ ಫೈಟ್ ಜೋರಾಗಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಅಲೋಕ್ ವಿಶ್ವನಾಥ್ ನಡುವೆ ಪೈಪೋಟಿ ಇದೆ.
ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಕೂಡ ಆಕಾಂಕ್ಷಿ
ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ಗಾಗಿ ಮೂವರು ಘಟಾನುಘಟಿಗಳ ನಡುವೆ ಪೈಪೋಟಿ ನಡೆದಿದೆ. ಹರಿಪ್ರಕಾಶ್ ಕೋಣೆಮನೆ, ಹಾಲಿ ಸಂಸದ ಅನಂತ ಕುಮಾರ್ ಹೆಗಡೆ ಮತ್ತು ಕಾಗೇರಿ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಮೂವರ ನಡುವೆ ಇದೀಗ ಚಕ್ರವರ್ತಿ ಸೂಲಿಬೆಲೆ ಹೆಸರು ಮುನ್ನಲೆ ಬಂದಿದೆ. ಹೀಗಾಗಿ ಯಾರಿಗೆ ಕೊಡಬೇಕೆನ್ನುವುದು ಹೈಕಮಾಂಡ್ಗೆ ದೊಡ್ಡ ತಲೆನೋವಾಗಿದೆ. ಇನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಈ ಬಾರಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಈ ಬಾರಿ ಟಿಕೆಟ್ ಕೊಡೋದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ದಕ್ಷಿಣ ಕನ್ನಡಕ್ಕೆ ಬ್ರಿಜೇಶ್ ಚೌಟಾ ಮತ್ತು ಕಿಶೋರ್ ಬೊಟ್ಯಾಡಿ ಬಗ್ಗೆ ಚರ್ಚೆಗಳು ನಡೆದಿವೆ. ಅಲ್ಲದೆಕೇಂದ್ರ ಸಚಿವ ಭಗವಂತ ಖೂಬಾಗೆ ಬೀದರ್ ಕ್ಷೇತ್ರದ ಟಿಕೆಟ್ ಅನುಮಾನ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರಕ್ಕೆ ಡಾ.ಮಂಜುನಾಥ್ಗೆ ಟಿಕೆಟ್ ಫಿಕ್ಸ್?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾಕ್ಟರ್ ಮಂಜುನಾಥ್ ಹೆಸರು ಕೇಳಿ ಬಂದಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಒಟ್ಟಾರೆ ಇಂದು ಅಥವಾ ನಾಳೆ ಖೇಲ್ ಖತಂ ಆಟ ಬಂದ್ ಆಗೋದಂತು ಗ್ಯಾರಂಟಿ