ದಾವಣಗೆರೆ: ತಾಲ್ಲೂಕಿನ ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ಎಡಗಾಲಿಗೆ ತೀವ್ರ ಪೆಟ್ಟಾಗಿದೆ. ತಾಲ್ಲೂಕಿನ ಕೋಲ್ಕುಂಟೆ ಗ್ರಾಮದ ಬಸವರಾಜ್ (35) ಗಾಯಗೊಂಡವರು. ಆನಗೋಡು ಬಳಿ ಬೈಕ್ನಲ್ಲಿ ಬರುತ್ತಿದ್ದ ಬಸವರಾಜ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಅವರನ್ನು ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.