ದಾವಣಗೆರೆ: ಶಿವಮೊಗ್ಗದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬಲಿಯಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಬೆನ್ನೇಲೆ ಈಗ ಸಂತೆಬೆನ್ನೂರಿನಲ್ಲಿ ಗುತ್ತಿಗೆದಾರರೊಬ್ಬರು ಮನನೊಂದು ನೇಣಿಗೆ ಶರಣಾಗಿದ್ದಾರೆ.
ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ಡಿಎಲ್) ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ (48) ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದು ,ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೇ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್ಐಡಿಎಲ್ ದೊಡ್ಡ ಮೊತ್ತದ ಪರಿಹಾರ ನೀಡಬೇಕೆಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ. ಮೃತ ಪಿಎಸ್ ಗೌಡರ್ ಪತ್ನಿ ವಸಂತ ಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಂತೇಬೆನ್ನೂರಿನ ಪೋಲೀಸ್ ಠಾಣೆಯಲ್ಲಿ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಸಹೋದರರಾದ ಶ್ರೀನಿವಾಸ ಹಾಗೂ ನಾಗರಾಜ್ ಅವರ ಬಗ್ಗೆ ಬರೆದಿದ್ದಾರೆ. ಜೊತೆಗೆ ಇವರು ಗುತ್ತಿಗೆದಾರ ಸಹ ಆಗಿದ್ದ ಇವರಿಗೆ ಹಣ ಬರಬೇಕಿತ್ತು. ಸಹೋದರ ತೊಂದರೆ ಹಾಗೂ ಬರಬೇಕಾದ ಒಟ್ಟು ಎಂಬತ್ತು ಲಕ್ಷ ಹಣ ಬರಬೇಕಿತ್ತು. ಈ ಎಲ್ಲ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕೆ ಸಂಬಂಧಿಸಿ ಪಿಎಸ್ ಗೌಡರ ಸಹೋದರರಾದ ನಾಗರಾಜ್, ಶ್ರೀನಿವಾಸ ಹಾಗೂ ಕೆಆರ್ಐಡಿಎಲ್ ಸೇರಿಸಿ ಸಂತೆ ಬೆನ್ನೂರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 306 ಕೇಸ್ ಬುಕ್ ಮಾಡಲಾಗಿದೆ ಎಂದು ಹೇಳಿದ್ದಾರೆ.
—–