


ದಾವಣಗೆರೆ; ಕಾರು ಚಾಲನೆ ಮಾಡುವಾಗ ಹೃದಯಾಘಾತವಾಗಿ ಕಾರು ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ, ಗುತ್ತಿಗೆದಾರ, ಕಾಂಗ್ರೆಸ್ ಯುವ ನಾಯಕ ಸುರೇಶ್ ಪೈ ಎಂಬುವವರು ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.ನಗರದ ಬನಶಂಕರಿ ಬಡಾವಣೆಯ ನಿವಾಸಿ ಸುರೇಶ್ ಪೈ ಮೃತಪಟ್ಟ ವ್ಯಕ್ತಿ.
ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರ ಸಮೀಪ ಕಾರಿ ಚಲಾಯಿಸುತ್ತಿದ್ದಾಗ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ಕಾರು ಗೋಡೆಗೆ ಡಿಕ್ಕಿ ಹೊಡೆದಿದ್ದು, ಸುರೇಶ್ ಪೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಶೈಲಜಾ ಮತ್ತವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
