
ಶಿವಮೊಗ್ಗ (ಆನಂದಪುರ) : ಸಮೀಪದ ಕೊರಲಿಕೊಪ್ಪ ಗ್ರಾಮದಲ್ಲಿ ಗುರುವಾರ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಗ್ರಾಮದ ಹರೀಶ್ (೩೦) ಸಾವಿಗೀಡಾ ದವನು. ಸ್ನಾನ ಮುಗಿಸಿ ಮನೆಯ ಪಕ್ಕದ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿದೆ.ಹರೀಶ್ ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ಎನ್ನಲಾಗುತ್ತಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.