ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ನೀಡಲು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಮತ್ತು ವಿದ್ಯಾರ್ಥಿ ವೇತನವನ್ನು ಕೂಡಲೇ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿಧಾನಪರಿಷತ್ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಗ್ರಾಮೀಣ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಉದ್ದೇಶದಿಂದ ನಗರ ಪ್ರದೇಶಕ್ಕೆ ಬಂದಿದ್ದಾರೆ. ಕಾಲೇಜು ಮತ್ತು ಪ್ರೌಢಶಾಲೆಗಳು ಈಗಾಗಲೇ ಆರಂಭವಾಗಿವೆ. ಆದರೂ ಕೂಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಸಿಕ್ಕಿರುವುದಿಲ್ಲ, ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗಿದೆ. ಎಲ್ಲಿ ಉಳಿದುಕೊಳ್ಳಬೇಕು ಎಂಬುವುದೇ ದೊಡ್ಡ ಪ್ರಶ್ನೆಯಾಗಿದೆ. ಈಗಾಗಲೇ ಹಾಸ್ಟೆಲ್ಗಳಿಗೆ ಅರ್ಜಿ ಹಾಕಲಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸರ್ಕಾರ ತಕ್ಷಣವೇ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ನೀಡಬೇಕು ಮತ್ತು ಹಾಸ್ಟೆಲ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.