ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು ಇತ್ತೀಚಿಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ, ಬಳ್ಳಾರಿ ಜಿಲ್ಲೆ ಬಿಡುಗಡೆಯಾಗಿದ್ದರು ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ಅವರು ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಈ ಹಿಂದೆ ಹೈಕೋರ್ಟ್ನಿಂದ ನಟ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ಗೆ ಚಿಕಿತ್ಸೆ ಪಡೆಯಲು ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.ಈ ಮೂಲಕ 131 ದಿನಗಳ ಹಿಂದೆ ನಟ ದರ್ಶನ್ ಜೈಲು ಸೇರಿದ್ದರು. ಅಂತೂ ಇಂತೂ ಇದೀಗ ಸೆರೆವಾಸದಿಂದ ಮುಕ್ತಿ ಪಡೆಯಲಿದ್ದಾರೆ. ಈ ಹಿಂದೆ ಅಭಿಮಾನಿಗಳು ನಟ ದರ್ಶನ್ ಬೇಗ ಸಂಕಷ್ಟದಿAದ ಪಾರಾಗಿ ಬರಲಿ ಎಂದು ಪ್ರಾರ್ಥಿಸುತ್ತಿದ್ದರು. ಕೊನೆಗೂ ಅಭಿಮಾನಿಗಳ ಆಸೆಯಿಂದ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬರಲಿದ್ದಾರೆ.ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಒಂದಷ್ಟು ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ದರ್ಶನ್ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದೆ.
ನಟ ದರ್ಶನ್ ವಿದೇಶಕ್ಕೆ ತೆರಳುವಂತಿಲ್ಲ. ಪಾಸ್ ಪೋರ್ಟ್ ಸರೆಂಡರ್ ಮಾಡುವಂತೆ ಕೋರ್ಟ್ ಷರತ್ತು ವಿಧಿಸಿತ್ತು. ದರ್ಶನ್ ಬಯಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಯಾವ ಚಿಕಿತ್ಸೆ ಆಗಿದೆ ಅಂತ ಕೂಡ ಕೋರ್ಟ್ಗೆ ರಿಪೋರ್ಟ್ ನೀಡಬೇಕು. ಒಂದು ವಾರದಲ್ಲಿ ಚಿಕಿತ್ಸೆಯ ವಿವರ ನೀಡುವಂತೆ ಸೂಚಿಸಲಾಗಿದೆ. ತಮಗೆ ಮಧ್ಯಂತರ ಜಾಮೀನು ಸಿಕ್ಕ ಬಗ್ಗೆ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ. ಇಂದೇ ದರ್ಶನ್ ಜೈಲಿನಿಂದ ಬಿಡುಗಡೆ ಆಗಿ ಮನೆಗೆ ಮರಳುವ ನಿರೀಕ್ಷೆಯಿದೆ.
ಏನಿದು ಘಟನೆ
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಜೂನ್ ಮೊದಲ ವಾರ ಕೆಟ್ಟದಾಗಿ ಮೆಸೇಜ್ ಮಾಡಲು ಆರಂಭಿಸಿದ್ದ. ಈ ವಿಚಾರ ದರ್ಶನ್ಗೆ ಗೊತ್ತಾಗಿ ಆಪ್ತರ ಮೂಲಕ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ಆತನನ್ನು ಕೂಡಿ ಹಾಕಿ ಥಳಿಸಲಾಗಿತ್ತು. ಇನ್ನು ಮುಂದೆ ಈ ರೀತಿ ಮಾಡದಂತೆ ಬುದ್ಧಿ ಕಲಿಸಲು ಪ್ರಯತ್ನಿಸಿದ್ದರು. ದರ್ಶನ್ & ಗ್ಯಾಂಗ್ ಆತನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಆತನಿಗೆ ಚಿತ್ರಹಿಂಸೆ ನೀಡಲಾಗಿತ್ತು. ಆದರೆ ಆತನ ಪ್ರಾಣವೇ ಹಾರಿ ಹೋಗಿತ್ತು.
ರೇಣುಕಾಸ್ವಾಮಿ ಪ್ರಾಣಬಿಟ್ಟ ನಂತರ ತಪ್ಪಿಸಿಕೊಳ್ಳಲು ಶವವನ್ನು ಬೇರೆ ಕಡೆ ಸಾಗಿಸಲಾಗಿತ್ತು. ಪಟ್ಟಣಗೆರೆ ಶೆಡ್ನಿಂದ ಶವವನ್ನು ಸುಮನಹಳ್ಳಿ ರಿಂಗ್ ರೋಡ್ ಬಳಿ ಎಸೆಯಲಾಗಿತ್ತು. ಬಳಿಕ ಹಣಕ್ಕಾಗಿ ಮೂವರು ಹೋಗಿ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದರು. ಹಣಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಹೇಳಿದ್ದರು. ಆದರೆ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿತ್ತು. ಜೂನ್ 11ರಂದು ಮೈಸೂರಿನಲ್ಲಿದ್ದ ದರ್ಶನ್ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದರು.
ಪ್ರಕರಣದಲ್ಲಿ 17 ಜನ ಆರೋಪಿಗಳನ್ನಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಬಳಿಕ ಸೆಷನ್ ಕೋರ್ಟ್ನಲ್ಲಿ ಹಾಜರುಪಡಿಸಲಾಗಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಪದೇ ಪದೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾಥಿತ್ಯ ಸಿಗುತ್ತಿದೆ ಎನ್ನುವ ಆರೋಪ ಕೇಳಿಬಂದಾಗ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ಬಿಪಿ ಹೆಚ್ಚಿದ್ದ ಕಾರಣ ಸರ್ಜರಿ ಮಾಡಿಲ್ಲ
ನಟನಿಗೆ ಬಿಪಿ ಏರುಪೇರಾಗುತ್ತಲೇ ಇದ್ದ ಕಾರಣ ಅವರಿಗೆ ಸರ್ಜರಿ ಮಾಡಿರಲಿಲ್ಲ. ನಟನಿಗೆ ಬಿಪಿ ಇದೆ, ಇಂಥಹ ಸ್ಥಿತಿಯಲ್ಲಿ ಅವರ ಆರೋಗ್ಯ ಕಂಟ್ರೋಲ್?ನಲ್ಲಿರದೆ ಸರ್ಜರಿ ಮಾಡೋಕಾಗಲ್ಲ ಎನ್ನಲಾಗಿತ್ತು. ಈ ಕುರಿತಾಗಿ ಸಿವಿ ನಾಗೇಶ್ ವಾದ ಮುಂದಿಟ್ಟಿದ್ದರು. ಸರ್ಜರಿ ಸಂಬAಧ ಅವರ ಪತ್ನಿಯೂ ಒಪ್ಪಿಗೆ ನೀಡದೆ ಇದ್ದ ಕಾರಣ ಸರ್ಜರಿ ವಿಳಂಬವಾಗಿತ್ತು.
ಪವಿತ್ರಾ ಗೌಡಗೆ ಸಿಕ್ತು ಜಾಮೀನು
ನಟಿ ಪವಿತ್ರಾ ಗೌಡಗೆ ಇಂದು ಬಿಗ್ ಡೇ ಆಗಿತ್ತು. ಕೊಲೆ ಕೇಸ್?ನಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಆರೋಪಿ 1 ಆಗಿದ್ದು ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದರು. ಇದೀಗ ನಟಿ ಪವಿತ್ರಾ ಗೌಡಗೆ ಈ ಪ್ರಕರಣದಲ್ಲಿ ಬೇಲ್ ಸಿಕ್ಕಿದೆ.
ಕಣ್ಣೀರಿಟ್ಟ ಪವಿತ್ರಾ ಗೌಡ
ಪವಿತ್ರಾ ಗೌಡ ಬಹಳ ಸಮಯದಿಂದ ಬೇಲ್?ಗೆ ಪ್ರಯತ್ನಿಸುತ್ತಲೇ ಇದ್ದರು. ಆದರೆ ಅವರಿಗೆ ಜಾಮೀನು ನಿರಾಕರಣೆಯಾಗಿತ್ತು. ಇದೀಗ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಪರಪ್ಪನ ಅಗ್ರಹಾರದ ಮುಂದೆ ಅವರು ಕಣ್ಣೀರಿಟ್ಟಿದ್ದಾರೆ.