ಭದ್ರಾವತಿ: ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಣಬಘಟ್ಟ, ತಡಸ ಮತ್ತು ಬಿಳಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ದೊಣಬಘಟ್ಟ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಶಾಖೆ ಮತ್ತು ಎಟಿಎಂ ಕೇಂದ್ರ ಕಾರ್ಯಾರಂಭಿಸಲು ಕ್ರಮ ಕೈಗೊಳ್ಳಿ’ ಎಂದು ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜನ್ನಾಪುರದ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆಯಿಂದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಪತ್ರ ಬರೆದಿದ್ದಾರೆ.
ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂದಾಜು ೪೦,೦೦೦ಕ್ಕೂ ಅಧಿಕ ಜನಸಂಖ್ಯೆ ಇದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಣಿಜ್ಯ ಬ್ಯಾಂಕ್, ಗ್ರಾಮೀಣ ಬ್ಯಾಂಕ್ ಮತ್ತು ಎ.ಟಿ.ಎಂ ಕೇಂದ್ರಗಳು ಇಲ್ಲದಿರುವುದರಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.