Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ಎಸಿ ನ್ಯಾಯಾಲಯಗಳ ಹಳೆ ಪ್ರಕರಣಗಳ ಇತ್ಯರ್ಥದ ಗುರಿ.
Blog

ಎಸಿ ನ್ಯಾಯಾಲಯಗಳ ಹಳೆ ಪ್ರಕರಣಗಳ ಇತ್ಯರ್ಥದ ಗುರಿ.

davangerevijaya.comBy davangerevijaya.com16 November 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಬಹುತೇಕ ಪ್ರಕರಣಗಳಿಗೆ ಮುಕ್ತಿ ತಕರಾರು ಅರ್ಜಿಗಳ ವಿಲೇಗೆ 18ಜನ ವಿಶೇಷ ‘ಎಸಿ’ಗಳ ನೇಮಕ ಜನವರಿ-ಫೆಬ್ರವರಿಯೊಳಗೆ ಎಲ್ಲಾ ಹಳೆ ಪ್ರಕರಣಗಳಿಗೂ ಇತ್ಯರ್ಥದ ಗುರಿ.

ಎಸಿ ನ್ಯಾಯಾಲಯಗಳಲ್ಲಿ ಹಿಂದಿನ ಸರಕಾರದಲ್ಲಿದ್ದ ಬಾಕಿ ಇದ್ದ ಪ್ರಕರಣ  ಶೇ.70ರಷ್ಟು ತಕರಾರು ಅರ್ಜಿಗಳ ವಿಲೇವಾರಿ

ಬೆಂಗಳೂರು;

ಕಂದಾಯ ನ್ಯಾಯಾಲಯ (ಎಸಿ) ಕೋರ್ಟ್ನಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ಶನಿವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಿ ಮಾತನಾಡಿದ ಅವರು, “ಎಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ನಿಗದಿಪಡಿಸಿರುವ ಕಾಲಮಿತಿ 6 ತಿಂಗಳು ಮಾತ್ರ. ಆದರೆ ಕಳೆದ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ನ್ಯಾಯಾಲಯಗಳ ಪ್ರಕರಣಗ ವಿಳಂಬದ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ರೈತರು ತೀವ್ರ ತೊಂದರೆ ಒಳಗಾಗಬೇಕಾದ ಸ್ಥಿತಿ ಎದುರಾಗಿತ್ತು” ಎಂದು ವಿಷಾದಿಸಿದರು.

“ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಎಸಿ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ 59,339 ಪ್ರಕರಣಗಳು ವಿಲೇ ಆಗದೆ ಬಾಕಿ ಉಳಿದಿದ್ದವು. ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಲೇ ಈ ರೀತಿಯಾಗಿ ಮಿತಿಮೀರಿ ವಿಳಂಭವಾಗುವುದರಿAದ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗುತ್ತಿರುವುದನ್ನು ಗಮನಿಸಿದ ನಮ್ಮ ಸರ್ಕಾರ ಇದಕ್ಕೊಂದು ಪರಿಹಾರ ನೀಡಲು ತೀರ್ಮಾನಿಸಿತ್ತು. ಬಾಕಿ ಪ್ರಕರಣಗಳನ್ನು ವಿಲೇ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಕಳೆದ ಒಂದು ವರ್ಷದಲ್ಲಿ ಬಾಕಿ ಪ್ರಕರಣಗಳ ವಿಲೇವಾರಿಯ್ನು ಅಭಿಯಾನ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ” ಎಂದರು.“ಎಸಿ ನ್ಯಾಯಾಲಯಗಳಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿ ಇದ್ದ 59,339 ಪ್ರಕರಣಗಳ ಪೈಕಿ 36956 ಕಳೆದ ಒಂದು ವರ್ಷದಲ್ಲಿ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಹಾಲಿ ಬಾಕಿಯನ್ನು 22383 ಕ್ಕೆ ಇಳಿಸಲಾಗಿದ್ದು, ಶೇ.70ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದೆ” ಎಂದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು.

“1 ರಿಂದ 5ವರ್ಷಗಳ ಅವಧಿಯಲ್ಲಿ ಬಾಕಿ ಉಳಿದಿದ್ದ 26,552 ಪ್ರಕರಣಗಳ ಪೈಕಿ 10,992 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಇನ್ನೂ 5 ವರ್ಷಕ್ಕೂ ಮೇಲ್ಪಟ್ಟ 32,787 ಪ್ರಕರಣಗಳನ್ನು ಈ ಹಿಂದಿನ ಸರ್ಕಾರ ಬಾಕಿ ಉಳಿಸಿಹೋಗಿತ್ತು. ಇದು ಆಡಳಿತ ಯಂತ್ರ ವೈಫಲ್ಯವಲ್ಲದೆ ಮತ್ತೇನು ಅಲ್ಲ. ಆದರೆ, ಈ ಪ್ರಕರಣಗಳನ್ನೂ ಕಳೆದ ಇಂದು ವರ್ಷದ ಅವಧಿಯಲ್ಲಿ 25,964 ಪ್ರಕರಣಗಳಿಗೆ ಮುಕ್ತಿ ನೀಡಲಾಗಿದೆ. ಕೇವಲ 6823 ಪ್ರಕರಣಗಳನ್ನು ಮಾತ್ರ ಉಳಿಸಲಾಗಿದೆ” ಎಂದು ಪ್ರಶಂಸಿಸಿದರು.
“ಎಸಿ ಕಂದಾಯ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಇತ್ಯರ್ಥಕ್ಕಾಗಿಯೇ ಸರ್ಕಾರ 18 ಜನ ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಕರಾರು ಅರ್ಜಿಗಳ ವಿಲೇವಾರಿಯನ್ನು ಎಲ್ಲಾ ಅಧಿಕಾರಿಗಳೂ ಇದೇ ವೇಗದಲ್ಲಿ ಮುಂದುವರೆಸಿದರೆ ಮುಂದಿನ ಜನವರಿ ಅಥವಾ ಫೆಬ್ರವರಿಯೊಳಗಾಗಿ ಎಲ್ಲಾ ಬಾಕಿ ಪ್ರಕರಣಗಳೂ ಇತ್ಯರ್ಥವಾಗಲಿದೆ.

ಅಲ್ಲದೆ, ಉಪವಿಭಾಗಾಧಿಕಾರಿಗಳು ವಾರಕ್ಕೆ ನಾಲ್ಕು ಮತ್ತು ವಿಶೇಷ ಉಪ ವಿಭಾಗಾಧಿಕಾರಿಗಳು ಎರಡು ಪ್ರಕರಣವನ್ನು ವಿಲೇಗೊಳಿಸಬೇಕು” ಎಂದು ಅವರು ತಿಳಿಸಿದರು. ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಬಿಜೆಪಿಗೆ ವಿಜಯೇಂದ್ರನೇ ಬಿಗ್‌ಬಾಸ್  : ಸರ್ಕಾರದ ವಿರುದ್ಧ ಹೋರಾಟದಲ್ಲಿ ಸಾಬೀತು ವಿರೋಧಿಗಳು ಸೈಲೆಂಟು

9 April 2025

ಅಪಘಾತ : ತಾತಾ-ಮೊಮ್ಮಗ ಸ್ಥಳದಲ್ಲಿಯೇ ಸಾವು, ಘಟನೆ ಹೇಗಾಯ್ತು?

20 March 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.