ದಾವಣಗೆರೆ : ದಾವಣಗೆರೆಯಲ್ಲಿ ವಿಧಾನಸಭೆ ಹಾಗೂ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದ್ದು, ಪಕ್ಷ ಸಂಘಟನೆಗೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಪುತ್ರ ಅನಿತ್ ಮುಂದಾಗಿದ್ದು, ಎಲ್ಲರನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.ಅಂತೆಯೇ ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನದ ತಾಲ್ಲೂಕು ಕಾರ್ಯಗಾರದಲ್ಲಿ ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್ ಕುಮಾರ್ ಭಾಗವಹಿಸಿ ಮಾತನಾಡಿ, ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಗಿರೀಶ್ ನಾಯ್ಕ, ಚನ್ನಗಿರಿಯ ಬಿಜೆಪಿ ಮುಖoಡ ಹೆಚ್ ಎಸ್ ಶಿವಕುಮಾರ್ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜುಳ ಟಿ ವಿ ರಾಜು ಮತ್ತು ಟಿ ವಿ ರಾಜು ಪಟೇಲ್ ರವರು ಮತ್ತು ಬಿಜೆಪಿ ಯ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ನವೀನ್ ಮತ್ತು ಅನೇಕ ಹಿರಿಯರು ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು.