ದಾವಣಗೆರೆ : ದಾವಣಗೆರೆಯಲ್ಲಿ ವಿಧಾನಸಭೆ ಹಾಗೂ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದ್ದು, ಪಕ್ಷ ಸಂಘಟನೆಗೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಪುತ್ರ ಅನಿತ್ ಮುಂದಾಗಿದ್ದು, ಎಲ್ಲರನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.ಅಂತೆಯೇ ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನದ ತಾಲ್ಲೂಕು ಕಾರ್ಯಗಾರದಲ್ಲಿ ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್ ಕುಮಾರ್ ಭಾಗವಹಿಸಿ ಮಾತನಾಡಿ, ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಕಾರ್ಯಕರ್ತರಲ್ಲಿ ಮನವಿ ಮಾಡಿದರು.