ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆಯ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಕಾರ್ಖಾನೆಯ ಮುಚ್ಚುವ ಆದೇಶ ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿ ಪಡಿಸುವುದು, ಕಾರ್ಖಾನೆಯ ವಸತಿಗೃಹ ಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಲ್ಲಿ ನೀಡುವುದು, 1998ರ ನಡುವೆ ನಿವೃತ್ತಿ ಹೊಂದಿರುವ ಕಾರ್ಮಿಕರಿಗೂ ವೈದ್ಯಕೀಯ ಭತ್ಯೆ ಯೋಜನೆ ಜಾರಿಗೊಳಿಸು ವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್, ನಿರ್ದೇಶಕರಾದ ಭೂಪೇಂದ್ರ ಮತ್ತು ಕೆ ಕೆ ಸಿಂಗ್ ಅವರಿಗೆ ಮನವಿ ಮಾಡಲಾಗಿದೆ. ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಅಡವೀಶಯ್ಯ ಇನ್ನಿತರರಿದ್ದರು.