ದಾವಣಗೆರೆ: ಕೆ.ಆರ್.ಎಸ್ ಪಕ್ಷವು ಆಗ್ನೇಯ ಶಿಕ್ಷಕರ ಕ್ಷೇತದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಈ ಚುನಾವಣೆಯಲ್ಲಿ ಶಿಕ್ಷಕರು ಕೆ.ಆರ್.ಎನ್. ಪಕ್ಷವನ್ನು ಬೆಂಬಲಿಸಬೇಕೆಂದು ಅಭ್ಯರ್ಥಿ ಕಿಶನ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಕ್ಷಕರು ನಿರಂತರವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು. ಅವುಗಳನ್ನು ಬಗೆಹರಿಸಲು ದಕ್ಷ ಮತ್ತು ಪ್ರಾಮಾಣಿಕ ಆಡಳಿತದಿಂದ ಮಾತ್ರ ಸಾಧ್ಯ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲ ಈ ನಿಟ್ಟಿನಲ್ಲಿ ಕೆ.ಆರ್.ಎಸ್. ಪಕ್ಷವು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದೆ.
ಪ್ರಸ್ತುತ ಅತಿಥಿ ಶಿಕ್ಷಕರ ಸಮಸ್ಯೆಯು ಬಹು ದೊಡ್ಡ ಸಮಸ್ಯೆಯಾಗಿದ್ದು ಕಳೆದ ಮೂರು ದಶಕಗಳಿಂದ ಈ ಸಮಸ್ಯೆ ಉಲ್ಬಣಗೊಳ್ಳುತ್ತಿದೆಯ ವಿನ, ಈ ಯಾವ ಸರ್ಕಾರಗಳಿಗೂ ಬಗೆಹರಿಸಲು ಸಾಧ್ಯವಾಗಿಲ್ಲ ಮತ್ತು ಮುಂದೆಯೂ ಅವರಿಗೆ ಬಗೆಹರಿಸಲು ಸಾಧ್ಯವಾಗುವುದಿಲ್ಲ. ಇನ್ನು ರಾಜ್ಯದ ಸರ್ಕಾರಿ ಶಾಲಾ ಕಾಲೇಜು ಶಿಕ್ಷಕರ ವರ್ಗಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಮತ್ತು ಕಾಲಕಾಲಕ್ಕೆ ನೇಮಕಾತಿಗಳು ನಡೆಯುತ್ತಿಲ್ಲ. ಇದರಿಂದ ಈ ವರ್ಗದವರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳು ಕಾಡುತ್ತಿವೆ. ಇವೆಲ್ಲ ಸಮಸ್ಯೆಗಳೂ ಒಂದಕ್ಕೊಂದು ಬೆಳೆದುಕೊಂಡಿದ್ದು, ಅಂತಿಮವಾಗಿ ಅದು ದಕ್ಷ ಮತ್ತು ಪ್ರಾಮಾಣಿಕ ಆಡಳಿತ ಬೇಕಿದೆ. ಪ್ರಸ್ತುತ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಂದ ಮತ್ತು ಅವರ ಅಭ್ಯರ್ಥಿಗಳಿಂದ ನಾವು ಇದನ್ನು ನಿರೀಕ್ಷಿಸಲು ಸಾಧ್ಯವೇ ಇಲ್ಲ. ಅದ್ದರಿಂದಲೇ ಅವರಿಂದ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವೇ ಇಲ್ಲ ಎಂದರು.
ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವುದು ಕೆ.ಆರ್.ಎಸ್. ಪಕ್ಷದ ಆದ್ಯತೆಯಾಗಿದೆ. ಈ ನಿಟ್ಟಿ ಶಿಕ್ಷಕರ ನೇಮಕಾತಿ ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸುವುದು ಅಷ್ಟೇ ಆದ್ಯತೆಯ ಕೆಲಸವಾಗಿದೆ ಆದ್ದರಿಂದ ಕರ್ನಾ ರಾಜ್ಯ ಸಮಿತಿ ಪಕ್ಷದ ಅಭ್ಯರ್ಥಿಯಾದ ಕಿಶನ್ ಎಂ. ಜಿ.ಆದ ನನ್ನನ್ಮು ಬೆಂಬಲಿಸಬೇಕೆಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಕೆ.ಎಸ್ ವೀರಭದ್ರಪ್ಪ,ವೆಂಕಟೇಶಪ್ಪ ಉಪಸ್ಥಿತರಿದ್ದರು