
ಭದ್ರಾವತಿ : ನಗರದ ಜನ್ನಾಪುರದಲ್ಲಿ ಯುವ ನಾಯಕ ಮಧು ಸೂಧನ್ ನೇತೃತ್ವದಲ್ಲಿ ನಟ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ನಗರದಲ್ಲಿ ಆರು ಅಡಿ ಎತ್ತರದ ಕಟೌಟ್ ಹಾಕಿ, ಇಡೀ ಏರಿಯಾವನ್ನು ವಿದ್ಯುತ್ ಅಲಂಕಾರದಿಂದ ಜಗಮಗಿಸಿ ಅಪ್ಪುಗೆ ಜೈಕಾರ ಹಾಕಿದರು.
ಇದೇ ವೇಳೇ ಪುನೀತ್ ಅಭಿಮಾನಿಗಳು ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾಲಂಕಾರ ಮಾಡಿ, ಪೂಜೆ ಸಲ್ಲಿಸಿ, ಕೇಕ್ ಕತ್ತರಿಸಿ ಅಗಲಿದ ನಟನ ಹುಟ್ಟುಹಬ್ಬವನ್ನು ಭಕ್ತಿಪೂರ್ವಕವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಮಧುಸುಧೂನ್ ಮಾತನಾಡಿ, ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ, ಅವರ ಸರಳ, ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ ವ್ಯಕ್ತಿತ್ವ ಪ್ರೇರಕ ಶಕ್ತಿಯಾಗಿದೆ. ನಮ್ಮಂತಹ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಅಜರಾಮರರಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಇದ್ದರು.