ಶಿವಮೊಗ್ಗ : ವೇಶ್ಯಾವಟಿಕೆ ನಡೆಸುತ್ತಿದ್ದ ಮನೆ ಮೇಲೆ ಶನಿವಾರ ಪೊಲೀಸರು ದಾಳಿ ನಡೆಸಿ ಸಂತ್ರಸ್ತೆಯೊಬ್ಬರನ್ನು ರಕ್ಷಿಸಿದ್ದಾರೆ. ಅಲ್ಲದೇ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ವಿನೋಬನಗರದಲ್ಲಿ ಈ ಘಟನೆ ನಡೆದಿದೆ. ವಿನೋಬನಗರದ ವಾಸದ ಮನೆಯೊಂದರಲ್ಲಿ, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರಡ್ಡಿ, ಮತ್ತು ಕಾರಿಯಪ್ಪ ಎ.ಜಿ, ಜಿಲ್ಲೆರವರ ಮಾರ್ಗದರ್ಶನದಲ್ಲಿ, ಡಿವೈ ಎಸ್ಪಿ ಸುರೇಶ್ ಮೇಲ್ವಿಚಾರಣೆಯಲ್ಲಿ, ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ, ನೇತೃತ್ವದ ಸಿಬ್ಬಂಧಿಗಳನ್ನೊಳಗೊAಡ ತಂಡ ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಿವಮೊಗ್ಗದ ಹೊಸಮನೆಯ ಶೇಖರ್ ಮೂರ್ತಿ (45) ದಸ್ತಗಿರಿ ಮಾಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.