- ಪ್ರಮುಖ ಸುದ್ದಿ
- ದಾವಣಗೆರೆ ವಿಶೇಷ
- ಕ್ರೈಂ ಸುದ್ದಿ
- ರಾಜಕೀಯ ಸುದ್ದಿ
- ರೈತಮಿತ್ರ
- ಅಡಕೆ ಧಾರಣೆ
- ಚಿನ್ನ, ಬೆಳ್ಳಿ ಧಾರಣೆ
- Blog
Subscribe to Updates
Get the latest creative news from FooBar about art, design and business.
Author: davangerevijaya.com
ದಾವಣಗೆರೆ : ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ದಾವಣಗೆರೆ ನಗರದ ಎಸ್ .ಕೆ .ವೀರಣ್ಣ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಎಸ್ ಕೆ ವೀರಣ್ಣನವರು ಉದ್ಯಮಿಗಳು ಹಾಗೂ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು ಇನ್ನು ಮುಂದೆ ಮಹಾಸಭಾದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರು ನಾಮನಿರ್ದೇಶನ ಮಾಡಿ ಶುಭ ಕೋರಿದ್ದಾರೆ.
ಶಿವಮೊಗ್ಗ;ಸಮಾಜದಲ್ಲಿ ಎಲ್ಲರಿಗೂ ಬೇಕಾದ ವ್ಯಕ್ತಿಯಾಗಿ ನಮ್ಮ ಸಂಘದ ಶಕ್ತಿಯಾಗಿ ದುಡಿಯುತ್ತಿದು, ಎಲ್ಲರ ಕಷ್ಟ ಕಾರ್ಪಣ್ಯಗಳಿಗೆ ಕೂಡಲೇ ಸ್ಪಂದಿಸಿ ಸಹಾಯವನ್ನು ನೀಡುತ್ತಿರುವ ಜ್ಯೋತಿಪ್ರಕಾಶ್ ಅವರು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಬೆಳೆಯುತ್ತಿದ್ದಾರೆ ಇವರಿಗೆ ದೇವರು ಆಯಸ್ಸು ಆರೋಗ್ಯವನ್ನು ಕರುಣಿಸಲಿ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಯೋಗಾಚಾರ್ಯ.ಸಿ.ವಿ ರುದ್ರಾರಾಧ್ಯ ಹಾರೈಸಿದರು. ನಗರದ ಶ್ರೀಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷರು ಹಾಗೂ ಕ್ಷೇಮಾಭಿವೃದ್ಧಿ ಸಂಘದ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ಸಮಿತಿಯ ಗೌರವಾಧ್ಯಕ್ಷರೂ. ಶ್ರೀ ಶಿವಗಂಗಾ ಯೋಗ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ, ಸರಳ ಸಜ್ಜನಿಕೆಯ ರಾಜಕಾರಣಿ ಎಸ್ ಜ್ಯೋತಿ ಪ್ರಕಾಶ್ ರವರಿಗೆ ಅವರ 66ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿದರು ಶ್ರೀ ಶಿವಗಂಗಾ ಯೋಗ ಕೇಂದ್ರದ ಕಟ್ಟಡದ ನಿರ್ಮಾಣದಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಹಾಗೆ ಬರುವ ದಿನಗಳಲ್ಲಿ ಅವರಿಂದ ಇನ್ನು ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನೆರವೇರಲಿ, ಜ್ಯೋತಿ ಪ್ರಕಾಶ್ ಅವರ ಅಧಿಕಾರದ ಅವಧಿಯಲ್ಲಿ ಶಿವಮೊಗ್ಗ ನಗರದಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಮಹತ್ತರ…
ದಾವಣಗೆರೆ;ದೇಶದಲ್ಲಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದ್ದು,ಇದರ ಉಪಯೋಗವನ್ನು ಸಹಕಾರ ಸಂಘಗಳು ಪಡೆದುಕೊಳ್ಳಬೇಕಿದೆ ಎಂದು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಡಾ.ಜೆ.ಆರ್.ಷಣ್ಮುಖಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿಂದು ಆರಂಭಗೊಂಡ ಅಖಿಲ ಭಾರತ 71 ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಈ ವರ್ಷದ ಘೋಷ ವಾಕ್ಯವಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳು ಪಾತ್ರ ದೊಡ್ಡದಾಗಿದೆ ಎಂದರು. ಜವಾಹರಲಾಲ್ ನೆಹರೂ ಕೂಡ ತಮ್ಮ ಜನ್ಮ ದಿನವನ್ನು ಸಹಕಾರ ಸಪ್ತಾಹವನ್ನಾಗಿ ಆಚರಿಸುವ ಪರಿಪಾಠ ಜಾರಿ ಮಾಡಿದರು. ಪ್ರಸ್ತುತ ಕೇಂದ್ರದಲ್ಲಿ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಿ ಅದಕ್ಕೆ ಒಬ್ಬ ಸಚಿವರನ್ನು ನೇಮಕಮಾಡಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇದರ ಉಪಯೋಗವನ್ನು ಸಹಕಾರ ಸಂಘಗಳು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯತಿಗೆ ಒಂದು ಸಹಕಾರ ಸಂಘ ಆರಂಭಕ್ಕೆ ಆದೇಶ ಮಾಡಿದೆ. ಇದರ ಉಪಯೋಗವನ್ನು ಯಾರೆ ಪಡೆದುಕೊಂಡರೂ…
ಶಿವಮೊಗ್ಗ : ಅಡಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಗ್ರಾಮಾಂತರ ಠಾಣೆ ಪೋಲೀಸರು ಐವರು ಆರೋಪಿಗಳನ್ನು ಬಂಧಿಸಿ, ವಿವಿಧೆಡೆ ಕಳವು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಅಡಕೆ ವಶಕ್ಕೆ ಪಡೆದ ಘಟನೆ ನಡೆದಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅನಿಲ್ ಆರ್ ಯಾನೆ ಜಾಕ್ (26), ಭದ್ರಾವತಿ ವಿಠಲಾಪುರ ಲೋಕೇಶ್ ಯಾನೆ ವಿಜಯ್ (27), ಶಿವಮೊಗ್ಗ ಬಸವನಗುಡಿ ಬಡಾ ವಣೆಯ ಮನೋಜ ಯಾನೆ ಮುರುಗೋಡು (20), ಹಾಡೋನಹಳ್ಳಿ ಗ್ರಾಮದ ನವೀನ್ ಪಿ ಯಾನೆ ನುಗ್ಗೆ (23) ಹಾಗೂ ಮಡಕೆ ಚೀಲೂರು ಗ್ರಾಮದ ನಿವಾಸಿ ಚಂದು ಎಸ್ ಯಾನೆ ಸುಣ್ಣ (20) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಶಿವಮೊಗ್ಗ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ, 3 ಅಡಕೆ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. 7. 35 ಲಕ್ಷ ರೂ. ಮೌಲ್ಯದ 15 ಕ್ವಿಂಟಾಲ್ 8 ಕೆಜಿ ತೂಕದ ಒಣ ಅಡಕೆ, 1.40 ಲಕ್ಷ ರೂ. ಮೌಲ್ಯದ 2 ಬೈಕ್, 1.…
ಶಿವಮೊಗ್ಗ :ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳಿಂದಲೂ ವಿವಿಧ ಸಾಲ ನೀಡಲು ಅವಕಾಶ ಇರುವುದರಿಂದ ಆಡಳಿತ ಮಂಡಳಿಗಳು ಹೊಸ ಉದ್ಯಮಗಳಿಗೆ ಸಾಲ ನೀಡಿ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಸದೃಢ ಮಾಡಬಹುದಾಗಿದೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಟಿ.ವಿ. ಶ್ರೀನಿವಾಸ್ ಹೇಳಿದರು. ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಸಹಕಾರ ಯೂನಿಯನ್, ಡಿಸಿಸಿ ಬ್ಯಾಂಕ್, ಶಿಮೂಲ್, ಇಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ ಕುರಿತು ಉಪನ್ಯಾಸ ನೀಡಿದರು. ದೇಶ ಅಭಿವೃದ್ಧಿಯಾಗುತ್ತಿದೆ ಎಂದರೆ ಸಹಕಾರಿ ಕ್ಷೇತ್ರದ ಪಾತ್ರ ಮುಖ್ಯವಾಗಿದೆ. ಆರಂಭದಲ್ಲಿ ರೈತರಿಗೆ ಮಾತ್ರ ಸಾಲ ನೀಡಲಾಗುತ್ತಿತ್ತು. ಈಗ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಎಲ್ಲಾ ರೀತಿಯ ಸಾಲ ನೀಡಲಾಗುತ್ತಿದೆ. ಹಳ್ಳಿಯಲ್ಲಿಯೇ ಅಗತ್ಯ ಉದ್ಯಮವನ್ನು ಆರಂಭಿಸಿದರೆ ಸದಸ್ಯರು ಬೇರೆ ಕಡೆ ಹೋಗುವುದಿಲ್ಲ ಎಂದರು. ಠೇವಣಿ ಹಾಗೂ ಎಸ್‍ಬಿ ಖಾತೆಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ನವರು ಗ್ರಾಹಕರ…
ಶಿವಮೊಗ್ಗ ನ.21ರಿಂದ 29ರವರೆಗೆ ನವುಲೆಯ ಕೆಎಸ್‍ಸಿಎ ಮತ್ತು ಜೆಎನ್‍ಎನ್‍ಸಿ ಕ್ರೀಡಾಂಗಣದಲ್ಲಿ 15 ವರ್ಷ ವಯೋಮಿತಿಯ ಅಂತರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಮಿತಿಯ ಸಂಚಾಲಕರು ಹಾಗೂ ಮಾಜಿ ಶಿವಮೊಗ್ಗ ವಲಯ ಸಂಚಾಲಕರಾದ ಡಿ.ಎಸ್.ಅರುಣ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಹಿಳಾ ಕ್ರಿಕೆಟ್ ಆಟಗಾರರನ್ನು ಪೆÇ್ರೀತ್ಸಾಹಿಸುವ ದಿಸೆಯಲ್ಲಿ ಬಿಸಿಸಿಐಯು ದೇಶದಲ್ಲಿ ಕಳೆದ ಎರಡು ವರ್ಷಗಳಿಂದ 15 ವರ್ಷ ವಯೋಮಿತಿಯ ಅಂತರ ರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ಕಳೆದ ಎರಡು ವರ್ಷಗಳಂತೆ ಈ ಬಾರಿಯೂ ಶಿವಮೊಗದಲ್ಲಿ ಆಯೋಜಿಸಲಾಗುತ್ತಿದೆ ಎಂದರು. ರಾಷ್ಟ್ರದ ವಿವಿಧ ರಾಜ್ಯಗಳ 36 ತಂಡಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಈ 36 ತಂಡಗಳನ್ನು ತಲಾ ಆರು ತಂಡಗಳಂತೆ ಆರು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಈ ಪೈಕಿ ‘ಎ’ ಗುಂಪಿನ ಆರು ತಂಡಗಳ ಪಂದ್ಯಾವಳಿಗಳು ಶಿವಮೊಗ್ಗದ ನವುಲೆ ರಸ್ತೆಯಲ್ಲಿರುವ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಮತ್ತು ಜೆ.ಎನ್.ಎನ್.ಸಿ.ಇ. ಶಿವಮೊಗ್ಗ, ಅಂಕಣಗಳಲ್ಲಿ ನಡೆಯಲಿದೆ ಎಂದರು. ‘ಎ’…
ಬೆಂಗಳೂರು:ನಗರದ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ನ.14 ರಂದು ರಾತ್ರಿ ಲಕ್ಷ್ಮೀ ಭುವನೇಶ್ವರಿ ದೇಗುಲದಲ್ಲಿ ದೇವಿ ವಿಗ್ರಹ ವಿರೂಪಗೊಳಿಸಲಾಗಿತ್ತು. ಕಿಡಿಗೇಡಿಗಳ ಕೃತ್ಯ ಕಂಡು ಆಕ್ರೋಶ ವ್ಯಕ್ತಪಡಿಸಿದ್ದ ಭಕ್ತರು ಪೊಲೀಸರಿಗೆ ದೂರು ನೀಡಿದ್ದರು. ದುಷ್ಕರ್ಮಿಗಳನ್ನು ಸಂಬಂಧಿಸಿದಂತೆ ಆಗ್ರಹಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ವಶಕ್ಕೆ ಪಡೆದಿದ್ದಾರೆ. ಆರೋಪಿಯೋರ್ವ ಅಪ್ರಾಪ್ತ ಬಾಲಕನಾಗಿದ್ದಾನೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ನಾಗಿದ್ದಕ್ಕೆ ದೇವರ ಮೇಲೆ ಕೋಪಗೊಂಡು ಲಕ್ಷ್ಮೀ ಭುವನೇಶ್ವರಿ ದೇವಿಯ ವಿಗ್ರಹವನ್ನು ವಿರೂಪಗೊಳಿಸಿಸಿದ್ದಾನೆ. ಬಾಲಕನು ದೈವ ಭಕ್ತನಾಗಿದ್ದ. ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಫೇಲ್ ಆಗಿದ್ದಾನೆ. ಇದರಿಂದ ಬೇಸರಗೊಂಡು ದೇವರ ವಿಗ್ರಹವನ್ನೇ ವಿರೂಪಗೊಳಿಸಿ ತೆರಳಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಲಕ ಬಾಯ್ಬಿಟ್ಟಿದ್ದಾನೆ.
ಬೆಂಗಳೂರು:ಡೇಟಿಂಗ್ ಆಪ್‌ನಲ್ಲಿ ಪರಿಚಯವಾದ ಯುವಕ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಆರೋಪಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾರ್ಚ್ ತಿಂಗಳಿನಲ್ಲಿ ಡೇಟಿಂಗ್ ಆಪ್‌ನಲ್ಲಿ ನಿಹಾಲ್ ಹುಸೇನ್ ಪರಿಚಯವಾಗಿತ್ತು. ಕೆಲ ದಿನಗಳ ಬಳಿಕ ನಮ್ಮ ನಡುವೆ ಆಪ್ತತೆ ಬೆಳೆದಾಗ ಪಾರ್ಟಿಗೆಂದು ಹೋಟೆಲ್‌ಗೆ ಕರೆಸಿಕೊಂಡಿದ್ದ. ಬಳಿಕ ಆತ ಜ್ಯೂಸ್‌ನಲ್ಲಿ ಮದ್ಯ ಬೆರೆಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗರ್ಭಿಣಿಯಾಗಿದ್ದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಪಾತ ಮಾಡಿಸಿದ್ದಾನೆ. ಮದುವೆಯಾಗು ಎಂದು ಹೇಳಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನನ್ವಯ ಎಲ್ಲ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದೇವೆ ಎಂದು ಮಡಿವಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು:ವಿದೇಶಕ್ಕೆ ಮಾದಕ ದ್ರವ್ಯ ಸಾಗಾಟದ ಪ್ರಕರಣದಲ್ಲಿ ಸಿಲುಕಿರುವಂತೆ ನಂಬಿಸಿ, ಪೊಲೀಸರ ಸೋಗಿನಲ್ಲಿ ಸಹಾಯ ಮಾಡುವುದಾಗಿ ಸಾಫ್ಟ್ ವೇರ್ ಉದ್ಯೋಗಿಯೊಬ್ಬರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಯುವತಿಯೊಬ್ಬರು ನೀಡಿರುವ ದೂರಿನನ್ವಯ ಮುಂಬೈ ಏರ್ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ 40.18 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ವಂಚಕರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 7ರಂದು ಅಪರಿಚಿತ ನಂಬರ್ ನಿಂದ ದೂರುದಾರ ಯುವತಿಗೆ ಕರೆ ಮಾಡಿದ್ದ ವಂಚಕನೊಬ್ಬ ತನ್ನನ್ನು ಕೋರಿಯರ್ ಕಂಪನಿಯೊಂದರ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ “ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್‌ಗೆ ಕಳುಹಿಸಿರುವ ಪಾರ್ಸೆಲ್‌ನಲ್ಲಿ ಎಂಡಿಎಂ ಸೇರಿದಂತೆ ಇತರೆ ಮಾದಕ ಪದಾರ್ಥಗಳಿವೆ. ನಿಮ್ಮ ವೈಯಕ್ತಿಕ ದಾಖಲಾತಿಗಳು ಮತ್ತು ಫೋನ್ ನಂಬರ್ ಕೋರಿಯರ್‌ಗೆ ಲಿಂಕ್ ಆಗಿದೆ. ಈ ಕುರಿತು ನಿಮಗೆ ಏನಾದರೂ ಗೊತ್ತಾ?” ಎಂದು ಕೇಳಿದ್ದಾನೆ. ದೂರುದಾರ ಯುವತಿ ತನಗೆ ಗೊತ್ತಿಲ್ಲ ಎಂದಾಗ “ಮುಂಬೈ ಏರ್ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಕರೆ ಕನೆಕ್ಟ್ ಮಾಡುತ್ತೇನೆ”…
ದಾವಣಗೆರೆ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಿರುಗುಬಾಣ ಆಗಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಜನರ ಜೀವ ಉಳಿಸುವ ಕ್ರಮ ತೆಗೆದುಕೊಂ ಡಿದ್ದಾರೆ. ಆದರೂ, ಭ್ರಷ್ಟಾಚಾರ ನಡೆದಿದೆ ಎಂದು ತನಿಖೆಗಾಗಿ ಎಸ್ಐಟಿ ರಚಿಸಿದೆ. ಮುಂದೇ ಅದೇ ರಾಜ್ಯ ಸರ್ಕಾರಕ್ಕೆ ನಿಶ್ಚಿತವಾಗಿ ತಿರುಗುಬಾಣ ಆಗಲಿದೆ ಎಂದು ಎಚ್ಚರಿಸಿದರು. ಬಿಜೆಪಿಯವರದ್ದು ಶೇ. 40 ಕಮಿಷನ್ ಸರ್ಕಾರ ಎಂಬ ಆರೋಪ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಶೇ. 100 ಕಮಿಷನ್ ಸರ್ಕಾರ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ದೂರಿದರು. ಜಮೀರ್ ಅಹಮ್ಮದ್ ಅವರನ್ನು ನಿಯಂತ್ರಣದಲ್ಲಿಡದಿದ್ದಲ್ಲಿ ಕಾಂಗ್ರೆಸ್ ಸರ್ವ ನಾಶ ಆಗುತ್ತದೆ ಎಂಬುದಾಗಿ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿದ್ದಾರೆ. ಅದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವ ಋಣ ಇದೆಯೋ ಗೊತ್ತಿಲ್ಲ. ಮತಾಂಧ ಜಮೀರ್ ಅಹಮ್ಮದ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾಗುತ್ತಿಲ್ಲ ಎಂದು…