Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ದಮನಿತರ ಏಳ್ಗೆಗೆ ಶ್ರಮಿಸಿದ ನಾಯಕ ಬಾಬೂಜಿ
ಪ್ರಮುಖ ಸುದ್ದಿ

ದಮನಿತರ ಏಳ್ಗೆಗೆ ಶ್ರಮಿಸಿದ ನಾಯಕ ಬಾಬೂಜಿ

ದೇಶದಲ್ಲಿ ಜಾತಿ ನಿರ್ಮೂಲನೆ, ಸಾಮಾಜಿಕ- ಆರ್ಥಿಕ ತಾರತಮ್ಯ ನಿವಾರಣೆ ಸಾಧ್ಯವಿಲ್ಲ
davangerevijaya.comBy davangerevijaya.com27 April 2024Updated:27 April 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ಜಾತಿ, ಧರ್ಮಗಳ ಭೇದಭಾವಗಳನ್ನು ವಿರೋಧಿಸುತ್ತಲೇ ರಾಜಕೀಯ ಶಕ್ತಿಯನ್ನು ಬಳಸಿಕೊಂಡು ದಮನಿತ ಸಮುದಾಯದ ಏಳ್ಗೆಗೆ ಶ್ರಮಿಸಿದ ಬಾಬು ಜಗಜೀವನರಾಮ್ ಅವರ ಕೊಡುಗೆ ಸದಾಕಾಲ ಸ್ಮರಣೀಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ, ರಾಜಕೀಯ ತಜ್ಞ ಪ್ರೊ.ಮಲ್ಲಿಕಾರ್ಜುನ ಆರ್.ಹಲಸಂಗಿ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದ ಬಾಬು ಜಗಜೀವನರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮತಾ ದಿನ ಸಮಾರಂಭದಲ್ಲಿ ದಿಕ್ಸೂಚಿ ಭಾಷಣದಲ್ಲಿ ಮಾತನಾಡಿದರು.ದೇಶದಲ್ಲಿ ಜಾತಿ ನಿರ್ಮೂಲನೆ, ಸಾಮಾಜಿಕ- ಆರ್ಥಿಕ ತಾರತಮ್ಯ ನಿವಾರಣೆ ಸಾಧ್ಯವಿಲ್ಲ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು ಎಂದರು.
ಬಾಬೂಜಿ ಅವರು ತಮ್ಮ ಸಾಮ್ಯವಾದಿ ತತ್ವ, ಹೋರಾಟ ಮನೋಭಾವ, ಸಹನೆ, ಆಧ್ಯಾತ್ಮಿಕ ಚಿಂತನೆಗಳ ಮೂಲಕ ಸಾಮಾಜಿಕ ಪರಿವರ್ತನೆ ಯಶಸ್ಸಿನ ಕನಸನ್ನು ಸಾಕಾರಗೊಳಿಸಲು ಯತ್ನಿಸಿದವರು ಎಂದು‌ ತಿಳಿಸಿದರು.

ಬಾಬೂಜಿ ಅವರು ಸತ್ಯವಾದಿ, ತತ್ವವಾದಿ ಮತ್ತು ಪ್ರಜಾಸತ್ತಾತ್ಮಕವಾದಿ ಆಗಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶವನ್ನು ರಾಜಕೀಯವೂ ಸೇರಿದಂತೆ ಕೃಷಿ, ಕೈಗಾರಿಕೆ ಆರ್ಥಿಕ ಅಭಿವೃದ್ಧಿಯನ್ನು ಸಾಂಸ್ಕೃತಿಕವಾಗಿ, ಕಟ್ಟುವ ಕೆಲಸದಲ್ಲಿ ಬಾಬೂಜಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.

ಐದು ದಶಕಗಳ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದ ಬಾಬೂಜಿ ದೇಶದಲ್ಲಿ ಹಸಿರು ಕ್ರಾಂತಿಯ ಸಾಕಾರ ಮೂರ್ತಿಯಾಗಿ ಆಹಾರದ ಸಂಕಷ್ಟವನ್ನು ನಿವಾರಿಸಿದರು. ಅಪ್ಪಟ ಪ್ರಜಾಸತ್ತಾತ್ಮಕವಾದಿ ಸಂಸದೀಯ ಪಟುವಾಗಿದ್ದ ಬಾಬೂಜಿ,ಮಹಾ ಸ್ವಾಭಿಮಾನಿ. ರಾಜಕೀಯ ಪಕ್ಷದ ನಿರ್ಧಾರಗಳನ್ನು ಖಂಡಿಸಿ ಸ್ವಂತ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ಛಲವಾದಿ. ಕೃಷಿ, ಕೈಗಾರಿಕೆ, ರೈಲ್ವೆ, ರಕ್ಷಣಾ ಸಚಿವರಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ತಳಸಮುದಾಯದ ಪ್ರಮುಖ ನಾಯಕ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಆಧ್ಯಾತ್ಮಿಕ ತತ್ವ, ಚಿಂತನೆಗಳ ಮೂಲಕ ರಾಜಕೀಯವಾಗಿ, ಆರ್ಥಿಕವಾಗಿ, ದೇಶದಲ್ಲಿ ಪರಿರ್ತನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ ಪ್ರಾಮಾಣಿಕ ರಾಜಕಾರಣಿ ಮುತ್ಸದ್ಧಿ ನಾಯಕ ಎಂದರು.ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಓದಿಸುವ ಮೂಲಕ ದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಚಾಲನೆ ನೀಡಿದರು. ಈಗ ವಿದೇಶಿ ವಿಶ್ವವಿದ್ಯಾಲಯಗಳು ಮನ್ನಣೆ ಪಡೆಯುತ್ತಿವೆ. ವಿದೇಶಿ ಸಂಸ್ಥೆಗಳುದೇಶದಲ್ಲಿ ಶಿಕ್ಷಣ ಕ್ಷೇತ್ರವನ್ನು ಪ್ರವೇಶಿಸಿದರೆ ತಾರತಮ್ಯದ ಅಪಾಯ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್ ಉಪಸ್ಥಿತರಿದ್ದರು. ಅಧ್ಯಯನ ಪೀಠದ ನಿರ್ದೇಶಕ ಪ್ರೊ.ರಾಮಲಿಂಗಪ್ಪ ಸ್ವಾಗತಿಸಿದರು.

ಕಾರ್ಯಕ್ರಮ ದಾವಣಗೆರೆ ನಾಯಕ ಬಾಬೂಜಿ
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.