ದಾವಣಗೆರೆ ; ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯಕ್ಕೆ ಮಾಜಿ ಸಂಸದ ಜಿಎಂ ಸಿದ್ದೇಶ್ವರ ನೇತೃತ್ವದಲ್ಲಿ ಜುಲೈ 30 ಕ್ಕೆ ಭದ್ರೆ ಗೆ ಬಾಗಿನ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಾಜಿ ಕೇಂದ್ರ ಸಚಿವ ಡಾ.ಜಿ.ಎಂ ಸಿದ್ದೇಶ್ವರ ಹಾಗೂ ಮುಖಂಡರಾದ ಗಾಯಿತ್ರಿ ಸಿದ್ದೇಶ್ವರ ಮತ್ತು ಶಾಸಕರು ಹಾಗೂ ಮಾಜಿ ಶಾಸಕರ ನೇತೃತ್ವದಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹಾಗೂ ಕುಮಾರ್ ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಆದ್ದರಿಂದ ಈ ಸಮರ್ಪಣಾ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ಮುಖಂಡರುಗಳು ಚುನಾಯಿತ ಪ್ರತಿನಿಧಿಗಳು,ಕಾರ್ಯಕರ್ತರು ರೈತ ಮುಖಂಡರು ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಾಜಿ ಸಂಸದರು ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.