
ದಾವಣಗೆರೆ : ಬ್ಯಾಂಕುಗಳಲ್ಲಿ ಅಗತ್ಯ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ಬ್ಯಾಂಕಿಂಗ್ ಸೇವೆಗಳನ್ನು ಹೊರಗುತ್ತಿಗೆ ನೀಡಬಾರದು ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟು ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ – UFBU ಯು ಮುಂಬರುವ ಮಾರ್ಚ್ ತಿಂಗಳ 24 ಮತ್ತು 25 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಪೂರ್ವಭಾವಿಯಾಗಿ ಇಂದು ದಾವಣಗೆರೆ ಜಿಲ್ಲಾ ಘಟಕದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಪ್ರತಿಭಟನಾ ಮತಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಮತಪ್ರದರ್ಶನ ಕಾರ್ಯಕ್ರಮದಲ್ಲಿ UFBU ನ ಎಲ್ಲ ಸದಸ್ಯ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ವಿನಂತಿಸುತ್ತೇವೆ ಎಂದು UFBU ನ ಎಲ್ಲ ಸದಸ್ಯ ಸಂಘಟನೆಗಳ ಪರವಾಗಿ…ದಾವಣಗೆರೆ ಸಂಚಾಲಕ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ವಿವರ : ದಿನಾಂಕ: 21-02-2025 ಶುಕ್ರವಾರ ಸಮಯ : ಸಂಜೆ 05-15 ಕ್ಕೆ
ಸ್ಥಳ : ಕೆನರಾ ಬ್ಯಾಂಕ್, ಮಂಡಿಪೇಟೆ, ದಾವಣಗೆರೆ. (ಅಶೋಕ ಟಾಕೀಸ್ ಪಕ್ಕ)