ಶಿವಮೊಗ್ಗ: ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾದಾಗ ಉತ್ತಮ ವ್ಯಕ್ತಿಯಾಗಿ ರೂಪಗೊಳ್ಳಬಹುದು ಎಂದು ರಂಗಾಯಣ ಮಾಜಿ ನಿರ್ದೇಶಕ ಸಂದೇಶ ಜವಳಿ ಹೇಳಿದರು.
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಗೋಪಾಲಗೌಡ ರಂಗಮಂದಿರದಲ್ಲಿ ರೋಟರಿ ಕ್ಲಬ್ ತೀರ್ಥಹಳ್ಳಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ತುಂಗಾ ಕಲೋತ್ಸವ ವಲಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ನಂತರ ಅನೇಕರು ದುಶ್ಚಟಗಳನ್ನು ತ್ಯಜಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡ ಉದಾಹರಣೆಗಳಿವೆ ಎಂದು ತಿಳಿಸಿದರು.
ರೋಟರಿ ಸಹಾಯಕ ಗವರ್ನರ್ ಎಚ್.ಎಂ.ಸುರೇಶ್, ಸಾಂಸ್ಕೃತಿಕ ಕಾರ್ಯಕ್ರಮಗಳು ಭಾಗವಹಿಸುವುದರಿಂದ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗುತ್ತದೆ. ರೋಟರಿ ಸದಸ್ಯರಲ್ಲಿ ಉತ್ತಮ ಬಾಂಧವ್ಯ ವೃದ್ಧಿಸುತ್ತದೆ. ಪರಸ್ಪರಲ್ಲಿ ಒಡನಾಟ ಜೊತೆಗೆ ಕುಟುಂಬದ ಎಲ್ಲ ಸದಸ್ಯರು ಸೇರಿ ಮಾಡುವಂತಹ ಸಾಂಸ್ಕೃತಿಕ ಕಾರ್ಯಕ್ರಮ ರೋಟರಿ ಸಂಸ್ಥೆಗಳ ಅವಿಭಾಜ್ಯ ಅಂಗ. ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಇಲ್ಲಿ ವಿಜೇತ ತಂಡ ಕುಂದಾಪುರದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದರು.
ಜಿಲ್ಲಾ ಸಾಂಸ್ಕೃತಿಕ ಉಪಾಧ್ಯಕ್ಷ ಧರ್ಮೇಂದ್ರ ಸಿಂಗ್ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜಮುಖಿ ಹಾಗೂ ಸೇವಾ ಕಾರ್ಯಗಳ ಜತೆಯಲ್ಲಿ ರೋಟರಿ ಸದಸ್ಯರಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಇದರಿಂದ ಪರಸ್ಪರ ಸಂವಹನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.ತೀರ್ಥಹಳ್ಳಿ ರೋಟರಿ ಕ್ಲಬ್ ಆತಿಥ್ಯದಲ್ಲಿ ನಡೆದ ಸಮಾರಂಭದಲ್ಲಿ 8 ರೋಟರಿ ಕ್ಲಬ್ಗಳಿಂದ 150ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದರು.
ಜೋನಲ್ ಲರ್ನಿಂಗ್ ಫೆಸಿಲಿಟೇಟರ್ ಕೆ.ಪಿ.ಎಸ್.ಸ್ವಾಮಿ, ಪಿ.ವಿ.ಭರತ್ ಕುಮಾರ್, ಶ್ರೀಕಾಂತ್ ಯಡಗರೆ, ರಾಧಾಕೃಷ್ಣ, ಸಂತೋಷ್, ಮಂಜುನಾಥ್ ರಾವ್ ಕದಂ, ಮಾಜಿ ಸಹಾಯಕ ಗವರ್ನರ್ ಜಿ ವಿಜಯಕುಮಾರ್.. ವಸಂತ ಹೋಬಳಿದಾರ್. ಡಾಕ್ಟರ್ ಗುಡದಪ್ಪ ಕಸಬಿ ರೋಟರಿ ಕ್ಲಬ್ ತೀರ್ಥಹಳ್ಳಿ ಕಾರ್ಯದರ್ಶಿ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.