ಶಿವಮೊಗ್ಗ : ಭದ್ರಾವತಿಯ ಜನ್ನಾಪುರದ ಓಂಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿಯವರು ನಿಗಧಿತ ಬೆಲೆಗಿಂತ 40 ರೂ.ಗಳನ್ನು ಹೆಚ್ಚಾಗಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಓಂ ಸಾಯಿ ಇಂಡಿಯನ್ ಗ್ಯಾಸ್ ಏಜೆನ್ಸಿಯವರು ಸಿಲಿಂಡರ್‌ನ ದರವನ್ನು ರಶೀದಿಯಲ್ಲಿ ನಮೂದಾಗಿರುವ ಬೆಲೆಗಿಂತ 40 ರೂ.ಗಳನ್ನು ಹೆಚ್ಚಿಗೆ ತೆಗೆದುಕೊಳ್ಳುತ್ತಿದ್ದಾರೆ ಇದು ಖಂಡನೀಯ. ಯಾವುದೇ ಕಾರಣಕ್ಕೂ ಹೀಗೆ ತೆಗೆದುಕೊಳ್ಳಬಾರದು. ಈಗಾಗಲೇ ಈ ಬಗ್ಗೆ ಪುಡ್ ಇನ್ಸ್ಫೆಕ್ಟರ್‌ಗೆ ದೂರು ನೀಡಲಾಗಿದೆ. ಆದ್ದರಿಂದ ಈ ಏಜೆನ್ಸಿಯನ್ನು ರದ್ದುಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದಲ್ಲದೆ ಭದ್ರಾವತಿಯ ಕೆ.ಎಂ.ಸಿ.ಗೋದಾಮಿನಲ್ಲಿ ಬಾರಿ ಭ್ರಷ್ಟಚಾರ ನಡೆಯುತ್ತಿದ್ದು, ಗೋದಾಮಿನಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ರೈಸ್‌ಮಿಲ್‌ಗಳಿಗೆ ಸಾಗಿಸಲಾಗುತ್ತಿದೆ. ಈ ಬಗ್ಗೆ ದೂರುಗಳಿದ್ದು, ಕರ್ತವ್ಯ ಲೋಪ ಎಸಗಿರುವ ಪುಡ್ ಇನ್ಸ್ಪೆಕ್ಟರ್ ವಿರುದ್ಧ ಸೂಕ್ತ ಕ್ರಮತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.