ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಡಾ. ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಕರ್ನಾಟಕ ಭೋವಿ ಸಂಘರ್ಷ ಸಮಿತಿಯ ವತಿಯಿಂದ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ಭೋವಿ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಗೌತಮ್ ವೆಂಕಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಡವರ, ದೀನ ದಲಿತರ, ಶ್ರಮಿಕರ ಹಾಗೂ ಎಲ್ಲಾ ವರ್ಗಗಳ ಜನಗಳನ್ನು ಒಳಗೊಂಡಿರುವ ಪಕ್ಷ ಯಾವುದಾದರೂ ಇದ್ದರೆ, ಅದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವಾಗಿದೆ. ಇದು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವಂತಹ ಪಕ್ಷವಾಗಿರುತ್ತದೆ. ಇಂದು ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ. ಹಿಂದಿನ ಭಾರತೀಯ ಜನತಾ ಪಕ್ಷದ ಸರ್ಕಾರವು ನಮ್ಮ ಸಮಾಜಕ್ಕೆ ಯಾವುದೇ ಒಂದು ಸಚಿವ ಸ್ಥಾನ ನೀಡದೇ ಮತ್ತು ಕೊನೆಯ ಭಾಗದಲ್ಲಿ ಭೋವಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದು ನಮ್ಮ ಸಮಾಜಕ್ಕೆ ಮಾಡಿರುವ ಅನ್ಯಾಯವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಭೋವಿ ಸಮಾಜಕ್ಕೆ ಆದ್ಯತೆ ನೀಡುವುದರ ಜೊತೆಗೆ ನಮ್ಮ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ.

ಶಿವರಾಜ್ ತಂಗಡಗಿಯವರನ್ನು ಸಚಿವರನ್ನಾಗಿ ನೇಮಿಸಿದ್ದು ಕಾಂಗ್ರೆಸ್ ಪಕ್ಷ, ಭೋವಿ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಮತ್ತು ಅಕ್ಕಮಹಾದೇವಿ ವಿಶ್ವ ವಿದ್ಯಾನಿಲಯದಲ್ಲಿ ಶ್ರೀ ಗುರುಸಿದ್ದರಾಮೇಶ್ವರ ಅಧ್ಯಯನ ಪೀಠ ಸ್ಥಾಪನೆ ಮಾಡಿದ್ದಾರೆ. ಜೊತೆಗೆ .ಭೋವಿ ಸಮಾಜದ ಶ್ರಮಿಕರಿಗೆ ಕಲ್ಲು ಮತ್ತು ಗಣಿಗಾರಿಕೆಯಲ್ಲಿ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಿ  ಸಹಕಾರ ನೀಡಿದ್ದಾರೆ ಆದ್ದರಿಂದ ಸಿದ್ದರಾಮಯ್ಯ ನವರ ಕೈ ಬಲಪಡಿಸಬೇಕು. ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 1,45,000 ಮತದಾರರಿದ್ದು 2024 ರ ದಾವಣಗೆರೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಇಡೀ ದಾವಣಗೆರೆ ಭೋವಿ ಸಮಾಜದ ಬಂಧುಗಳು ಪಕ್ಷತೀತವಾಗಿ  ಮತ ಚಲಾಯಿಸುವುದರ ಮೂಲಕ ಗೆಲ್ಲಿಸಬೇಕೆಂದು ಸಮಾಜದ ಬಾಂಧವರಿಗೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ‌ ಕಾರ್ಯದರ್ಶಿ ಡಿ.ಬಸವರಾಜ್, ಎಸ್.ಹನುಮಂತಪ್ಪ,ವಿ.ಎನ್ ಪರಮೇಶ್ವರಪ್ಪ,ಶಂಕರಪ್ಪ,ಹೆಚ್.ಮಂಜುನಾಥ್, ಎಸ್.ಅರುಣ್ ಕುಮಾರ್ ಚೌಡಪ್ಪ,ಚಮನ್ ಸಾಬ್, ಶಿವಣ್ಣ ಉಪಸ್ಥಿತರಿದ್ದರು.

Share.
Leave A Reply

Exit mobile version