ದಾವಣಗೆರೆ : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸಿಎಂ ಕುರ್ಚಿ ಅಲುಗಾಡುತ್ತಿದೆ. ಮೂರು ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ. ಹಾಗಾದ್ರೆ ಸಿಎಂ ಸಿದ್ದು ರಾಜೀನಾಮೆ ಕೊಡ್ತಾರಾ? ಯಾರಾಗಲಿದ್ದಾರೆ ಮುಂದಿನ ಸಿಎಂ? ಈ ಕುರಿತು ಇನ್ನಷ್ಟು ಮಾಹಿತಿ ನಿಮಗೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ 14ಸೈಟ್ ಹಂಚಿಕೆಯಾಗಿರುವ ಪ್ರಕರಣ ದೊಡ್ಡ ಮಟ್ಟದ ತಿರುವುದು ಪಡೆದುಕೊಂಡಿದೆ. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲಕರ ನಡೆ ಸರಿಯಾಗಿದೆ ಎಂದು ತೀರ್ಪು ನೀಡಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ.
ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ.
ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.ಇತ್ತ ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಇನ್ನೊಂದೆಡೆ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮೂರು ಪಕ್ಷಗಳು ತಮ್ಮ ಕಾರ್ಯ ಪ್ರದರ್ಶನಕ್ಕೆ ಮುಂದಾಗಿವೆ. ಕಾಂಗ್ರೆಸ್ ಹೈಕಮಾಂಡ್ ನಡೆ ಬಗ್ಗೆ ಭಾರಿ ಕುತೂಹಲ ಮೂಡಿದೆ.ಒಟ್ಟಿನಲ್ಲಿ ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಕುತ್ತುಗೆಗೆ ಉರುಳಾಗಿ ಮಾರ್ಪಡುವ ಎಲ್ಲ ಸಾಧ್ಯತೆ ದಟ್ಟವಾಗಿದೆ.