ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ದಾವಣಗೆರೆಯ ತರಳುಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಶಾಲೆಯ 236 ನಂಬರ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.ಗಾಯತ್ರಿ ಸಿದ್ದೇಶ್ವರ್ ಅವರಿಗೆ ಪತಿ,ಸಂಸದ ಜಿಎಂ ಸಿದ್ದೇಶ್ವರ್, ಪುತ್ರಿ ಅಶ್ವಿನಿ, ಪುತ್ರ ಅನಿತ್ ಸೇರಿದಂತೆ ಬಿಜೆಪಿ ನಾಯಕರು ಸಾಥ್ ನೀಡಿದರು.ಇದೇ ವೇಳೆ
ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಕುಟುಂಬದ ಸದಸ್ಯರು ಕೂಡ ಸರದಿ ಸಾಲಲ್ಲಿ ನಿಂತು ಮತದಾನ ಮಾಡಿದರು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗಾಯಿತ್ರಿ ಸಿದ್ದೇಶ್ವರ, ಎಲ್ಲೆಡೆ ಉತ್ತಮ ವಾತಾವರಣ ಇದೆ. ಗೆದ್ದೇ ಗೆಲ್ಲುವ ವಿಶ್ವಾಸ ಇದೆ. ದಾವಣಗೆರೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಕ್ಷೇತ್ರದಲ್ಲಿ ಎಲ್ಲಾಕಡೆ ಉತ್ತಮ ವಾತಾವರಣವಿದೆ.ಜನ ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ.ಜನರ ಉತ್ಸಾಹ ನೋಡಿದರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅತೀ ಹೆಚ್ಚು ಮತಗಳಿಂದ ಗೆಲುವು ಪಡೆಯಲಿದ್ದಾರೆ ಎಂದರು.ಮೂರನೇ ಬಾರಿಯೂ ಬಿಜೆಪಿ ಗೆಲುವು ಪಡೆಯಲಿದ್ದು ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದರು.ಇದೇ ವೇಳೆ ಜಿ.ಎಂ ಸಿದ್ದೇಶ್ವರ್ ಅವರ ಮೊಮ್ಮಕ್ಕಳು ಪ್ರಥಮಬಾರಿಗೆ ಹಕ್ಕು ಚಲಾಯಿಸಿದರು.