ದಾವಣಗೆರೆ: ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ನಾಳೆ ಮೆರವಣಿಗೆ ಮೂಲಕ ಕಾರ್ಯಕರ್ತರು,ಮುಖಂಡರು ಹಾಗೂ ಅಭಿಮಾನಿಗಳೊಂದಿಗೆ ತೆರಳಿ ಮತ್ತೊಮ್ಮೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. 19ರ ಬೆಳಗ್ಗೆ 9.30ಗಂಟೆಗೆ ದಾವಣಗೆರೆಯ ಮೂರು ಸ್ಥಳದಿಂದ ಮೆರವಣಿಗೆ ಆರಂಭವಾಗಲಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೊದಲ ಮೆರವಣಿಗೆ ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ದೇವಸ್ಥಾನದಿಂದ, 2ನೇ ಮೆರವಣಿಗೆ ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನದ ಮಾರ್ಗದಿಂದ ಹಾಗೂ ರಾಮ್ ಅಂಡ್ ಕೋ ವೃತ್ತದ ಮಾರ್ಗವಾಗಿ 3ನೇ ಮೆರವಣಿಗೆ ಸಾಗಲಿದೆ. ಮೆರವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರುಗಳಾದ ಜನಾರ್ಧನರೆಡ್ಡಿ, ಭೈರತಿ ಬಸವರಾಜ್, ಬಿ.ಶ್ರೀರಾಮುಲು, ಜೆ.ಸಿ. ಮಾಧುಸ್ವಾಮಿ, ಬಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಶೃತಿ,ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಹಾಲಿ ,ಮಾಜಿ ಶಾಸಕರುಗಳು ,ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.
ಮೊದಲ ಮೆರವಣಿಗೆ ನಗರ ದೇವತೆ ಶ್ರೀ ದುರ್ಗಾಂಬಿಕ ದೇವಿ ದೇವಾಲಯದಿಂದ ಎಸ್ಕೆಪಿ ರಸ್ತೆ, ಗಡಿಯಾರ ಕಂಬ, ಕೆಳಸೇತುವೆ, ಹಳೇ ಬಸ್ ನಿಲ್ದಾಣ, ಮಹಾನಗರ ಪಾಲಿಕೆ, ಅರುಣಾ ಚಿತ್ರಮಂದಿರದ ವೃತ್ತದಲ್ಲಿ ಕೊನೆಗೊಳ್ಳಲಿದೆ. 2ನೇ ಮೆರವಣಿಗೆ ನಿಟುವಳ್ಳಿಯ ಗ್ರಾಮದೇವತೆ ಶ್ರೀ ದುರ್ಗಾಂಬಿಕ ದೇವಿ ದೇವಸ್ಥಾನದಿಂದ ಹೆಚ್ಕೆಆರ್ ವೃತ್ತ, ಕೆಟಿಜೆ ನಗರ 1ನೇ ಮುಖ್ಯ ರಸ್ತೆ, ಜಯದೇವ ವೃತ್ತ, ಲಾಯರ್ ರಸ್ತೆ, ಗಾಂದಿ ವೃತ್ತ, ಹಳೇ ವಾಣಿ ಹೊಂಡಾ ಶೋ ರೂಂವರೆಗೆ ಸಾಗಿ ಅಂತ್ಯಗೊಳ್ಳಲಿದೆ.
ದಾವಣಗೆರೆ ನಗರದ ಪಿ.ಜೆ. ಬಡಾವಣೆಯ ರಾಂ ಆಂಡ್ ಕೋ ಸರ್ಕಲ್ನಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 4ನೇ ಮುಖ್ಯರಸ್ತೆ ಮೂಲಕ ಸಾಗಿ ಚೇತನಾ ಹೋಟೆಲ್ ಮುಂಭಾಗದಿಂದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್, ಜಯದೇವ ಸರ್ಕಲ್, ಗಾಂಧಿ ಸರ್ಕಲ್ ಮೂಲಕ ಮಹಾನಗರ ಪಾಲಿಕೆಯ ಮುಂಭಾಗದಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಮೆರವಣಿಗೆಯ ಮೂಲಕ ಸಾಗಿ ಮಧ್ಯಾಹ್ನ 2ಕ್ಕೆ ಗಂಟೆಗೆ ಜಿಲ್ಲಾಧಿಕಾರಿ ಕಛೇರಿಗೆ ತಲುಪಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಯಶವಂತ ರಾವ್, ಕೊಳೇನಹಳ್ಳಿ ಬಿ.ಎಂ.ಸತೀಶ್, ಹೆಚ್.ಎನ್.ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್, ಗೋವಿಂದ ರಾಜ್, ಶ್ರೀನಿವಾಸ್ ದಾಸಕರಿಯಪ್ಪ, ದಂಡಪಾಣಿ, ಟಿಂಕರ್ ಮಂಜಣ್ಣ ಇತರರು ಇದ್ದರು.