ದಾವಣಗೆರೆ : ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಪ್ರತಿಪಕ್ಷ ಬಿಜೆಪಿ ಅಸಮರ್ಥವಾಗಿದೆ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಲ್ಲ. ಬಣ ರಾಜಕೀಯ ಮೇಲಾಗಿದೆ ಎನ್ನುವ ವರದಿ ಹೊರಬಿದ್ದಿದೆ. ಏನು ಇಲ್ಲ ಎಂದು ಹೇಳುವ ಪರಿಸ್ಥಿತಿಯಲ್ಲಿ ಪಕ್ಷದ ಯಾವುದೇ ನಾಯಕರು ತಯಾರಿಲ್ಲ. ಇದಕ್ಕೆ ಪೂರಕ ಎಂಬಂತೆ ಪಕ್ಷದ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಬಣ ರಾಜಕೀಯ ಬಿಜೆಪಿ ಸಂಘಟನೆಗೆ ಹಿನ್ನಡೆ ತಂದಿದೆ. ಹಾಗಾದ್ರೆ ಇದಕ್ಕೆ ಕಾರಣವೇನು? ಅಮಿತ್ ಶಾ ಕೊಟ್ಟ ಸಂದೇಶ ಫೇಲ್ ಆಯ್ತಾ? ಈ ಕುರಿತ ಸ್ಟೋರಿ ಇಲ್ಲಿದೆ.

ಕರ್ನಾಟಕ ಬಿಜೆಪಿ ‘ಭವ್ಯ ಭಾರತದ ಭವಿಷ್ಯಕ್ಕಾಗಿ ಬಿಜೆಪಿ ಸದಸ್ಯತಾ ಅಭಿಯಾನ’ ಎಂಬ ಬಹುದೊಡ್ಡ ಅಭಿಯಾನವನ್ನು ದೇಶಾದ್ಯಂತ ನಡೆಸುತ್ತಿದೆ. ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ಪಕ್ಷ ನಡೆಸುತ್ತಿರುವ ರಾಷ್ಟç್ರ ಮಟ್ಟದ ಅಭಿಯಾನ ಇದು. ಕರ್ನಾಟಕದಲ್ಲಿ 1.5 ಕೋಟಿ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿಯನ್ನು ಹೊಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸದಸ್ಯತಾ ಅಭಿಯಾನ ಚುರುಕುಗೊಳಿಸಿದ್ದಾರೆ. ಆದರೆ ಪಕ್ಷದಲ್ಲಿರುವ ಆಂತರಿಕ ಭಿನ್ನಮತ, ಎರಡು ಬಣದ ಕಾರಣಕ್ಕೆ ಅಭಿಯಾನಕ್ಕೆ ಹಿನ್ನಡೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ವಿಜಯೇಂದ್ರ ವಿರುದ್ಧ ಉತ್ತರ ಕರ್ನಾಟಕ, ಬೆಳಗಾವಿ ಭಾಗದ ನಾಯಕರು ಬಹಿರಂಗವಾಗಿ ಅಸಮಾಧಾನವನ್ನು ಹೊರಹಾಕಿದ್ದಾರೆ. ಪಕ್ಷದಲ್ಲಿನ ಈ ಅಸಮಾಧಾನಗಳು ಕಾರ್ಯಕರ್ತರು, ಸ್ಥಳೀಯ ನಾಯಕರ ನಿರುತ್ಸಾಹಕ್ಕೂ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಆರ್‌ಎಸ್‌ಎಸ್ ಬಿಜೆಪಿಯೊಳಗಿನ ಅಸಮಾಧಾನ ಬಗೆಹರಿಸಲು ಸಭೆಯನ್ನು ನಡೆಸಿತ್ತು. ಆದರೆ ಈ ಸಭೆಯ ಬಳಿಕವೂ ಬಿಜೆಪಿಯಲ್ಲಿ ಎಲ್ಲರೂ ಸರಿಯಾಗಿಲ್ಲ. ಬಿ.ವೈ.ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂಬ ಪಕ್ಷದೊಳಗಿನ ಕೂಗು ಹಾಗೆಯೇ ಇದೆ.

ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಸ್ಥಳೀಯ ಮಟ್ಟದಲ್ಲಿ ಸಣ್ಣಪುಟ್ಟ ಅಸಮಾಧಾನಕ್ಕೆ ಕಾರಣವಾಗಿದೆ. ಯಡಿಯೂರಪ್ಪ, ಅವರ ಮಕ್ಕಳುನ್ನು ವಿರೋಧಿಸುವ ಮತ್ತೊಂದು ಬಣ ಸಕ್ರಿಯವಾಗಿದೆ. ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಪಕ್ಷ ಎದುರಿಸಬೇಕಿದೆ.

ಅಧಿಕಾರದಲ್ಲಿದ್ದು ಪ್ರಬಲವಾಗಿರುವ ಕಾಂಗ್ರೆಸ್ ಎದುರಿಸಲು ಬಿಜೆಪಿಗೆ ಬಣ ರಾಜಕೀಯವೇ ಹಿನ್ನಡೆಯಾಗಲಿದೆ.
ರಾಜ್ಯ ಪ್ರವಾಸದ ಜಿಲ್ಲೆಗಳಿಗೆ ಹೋದಾಗ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ಇದು ಕೇವಲ ಒಂದು ದಿನದ ಪ್ರಕ್ರಿಯೆಯಲ್ಲ ಅವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ” ಎಂದು ವಿಜಯೇಂದ್ರ ಹೇಳಿದ್ದಾರೆ. ನಾನು ನನ್ನನ್ನು ದೊಡ್ಡ ನಾಯಕ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಬಿಜೆಪಿಯ ಕೇಂದ್ರ ನಾಯಕರು ನನ್ನ ಮೇಲೆ ಭರವಸೆ ಇಟ್ಟು ಜವಾಬ್ದಾರಿಯನ್ನು ನೀಡಿದ್ದಾರೆ. ಅದನ್ನು ನಾನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇನೆ” ಎಂದು ಹೇಳಿದ್ದಾರೆ. “ಇದು ಪಕ್ಷದೊಳಗೆ ಇಂತಹ ಸಂಘರ್ಷ ನಡೆಸುವ ಸಂದರ್ಭವಲ್ಲ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ದುರಾಡಳಿತ ಮತ್ತು ಹಗರಣದಲ್ಲಿ ತೊಡಗಿದೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕು. ಜನರಿಗೆ ಸರ್ಕಾರವ ಆಡಳಿತ ವೈಫಲ್ಯವನ್ನು ನಾವು ತೋರಿಸಬೇಕಿದೆ” ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ಬಿಜೆಪಿ ಆತಂಕರಿಕ ಕಚ್ಚಾಟ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ.

Share.
Leave A Reply

Exit mobile version