ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಖಂಡಿಸಿದ್ದಾರೆ. ‘ರಾಹುಲ್ ಗಾಂಧಿ ಅವರು ಈಚೆಗೆ ಅಮೆರಿಕಾದ ಜಾರ್ಜ್ಟೌನ್‌ನ ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಇದು ಸರಿಯಲ್ಲ. ರಾಹುಲ್ ಗಾಂಧಿ ಸಂವಿಧಾನವನ್ನು ಅರ್ಥ ಮಾಡಿಕೊಂಡಿಲ್ಲ. ಅವರಿಗೆ ದಲಿತರ, ಹಿಂದುಳಿದವರ ಮತ ಬೇಕು. ಆದರೆ ಅವರಿಗೆ ಸೌಲಭ್ಯ ನೀಡುವುದು ಬೇಕಿಲ್ಲ. ಕಾಂಗ್ರೆಸ್ ಮೊದಲಿನಿಂದಲೂ ಮೀಸಲಾತಿ ವಿರೋಧಿ ನಡೆ ಅನುಸರಿಸಿ ಕೊಂಡು ಬಂದಿದೆ. ಮೀಸಲಾತಿ ದಲಿತರ ಹಕ್ಕು. ಅದನ್ನು ಯಾರೂ ಕಸಿದುಕೊಳ್ಳಲು ಬಿಜೆಪಿ ಬಿಡುವುದಿಲ್ಲ. ಕೂಡಲೇ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.‘ಎಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ದಲಿತರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡಿಕೊಂಡು ಬಂದಿದೆ. ದಲಿತರನ್ನು ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ರೂಪದಲ್ಲಿ ಕಾಣುತ್ತಿದೆ’ ಎಂದು ದೂರಿದ್ದಾರೆ.