ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಏ.15ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ತ್ಯಾವಣಿಗೆಯ ನೀರಾವರಿ ಇಲಾಖೆಯ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಕರುಣಾಕರ ರೆಡ್ಡಿ, ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಶಾಸಕರು ಹಾಗೂ ಜೆಡಿಎಸ್ ಮುಖಂಡರು ಆಗಮಿಸಲಿದ್ದಾರೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ದೇವೇಂದ್ರಪ್ಪ ಶ್ಯಾಗಲೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅನಿಲ್ ಕುಮಾರ್ ಕತ್ತಲಗೆರೆ, ಗುಡ್ಡೇಶ್ ಅಣಜಿ, ಮಹೇಂದ್ರ ಹೆಬ್ಬಾಳ್, ಓಂಕಾರಪ್ಪ ಕರಿಲಕ್ಕೇನಹಳ್ಳಿ ಇದ್ದರು.