ದಾವಣಗೆರೆ : ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಇಳಿದ ಕಾಂಗ್ರೆಸ್ ಬಹುಸಂಖ್ಯಾತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಪರ ಹರಿಹರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಹುಸಂಖ್ಯಾತರನ್ನು ಬಿಟ್ಟು, ಅಲ್ಪಸಂಖ್ಯಾತರಿಗೆ ಮಣೆ ಹಾಕುತ್ತಿದೆ ಎಂದರು.

ರಾಜ್ಯದಲ್ಲಿ ಏಪ್ರಿಲ್ 28 ಮತ್ತು 29 ರಂದು ಮತ್ತೇ ಮೋದಿ ಮೇನಿಯಾ‌ ಶುರುವಾಗಲಿದೆ.  ದಾವಣಗೆರೆಗೆ ಏಪ್ರಿಲ್ 28 ಪ್ರಧಾನಿ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಪ್ರಧಾನಿ ಮೋದಿ, ಏಪ್ರೀಲ್ 28 ರಂದು ರಾಜ್ಯದ ನಾಲ್ಕು ಕಡೆ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳುವರು. 

ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಸಮಾವೇಶ, ನಂತರ 12 ಗಂಟೆಗೆ ಕಾರವಾರ ಪ್ರಚಾರ ಸಭೆಯಲ್ಲಿ ಭಾಗಿಯಾಗಿಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಹೈಸ್ಕೂಲ್ ‌ಮೈದಾನದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.ನಂತರ ಹೊಸಪೇಟೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯದಲ್ಲಿ ಮೋದಿ ವಾಸ್ತವ್ಯ ಹೂಡುವರು.

ಮಧ್ಯ ಕರ್ನಾಟಕದ ದಾವಣಗೆರೆ ಸಮಾವೇಶಕ್ಕೆ ಒಂದೂವರೆಯಿಂದ 2 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ  ಇದೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.ಏ.28 ಮಧ್ಯಾಹ್ನ 2 ಗಂಟೆಗೆ ಹಾವೇರಿ ಮತ್ತು ದಾವಣಗೆರೆ ಅಭ್ಯರ್ಥಿಗಳ ಪರ ನಮೋ ಪ್ರಚಾರ ಮಾಡಲಿದ್ದಾರೆ ಎಂದು ವಿಜಯೇಂದ್ರ‌ ಹೇಳಿದರು. 

ಸಂಸದರ ರಾಸಲೀಲೆ ಸಿಡಿ ಬಗ್ಗೆ  ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ ಈ ಬಗ್ಗೆ ನನಗೆವಮಾಹಿತಿ ಇಲ್ಲವೆಂದರು. ಮೋದಿ ಎನ್ನುವುದು ಒಂದು ಶಕ್ತಿ ಜನ ಮೋದಿ ನೋಡಿ ಮತ ಹಾಕುತ್ತಾರೆ. ಕಾಂಗ್ರೆಸ್ ನ ಮಾನಸಿಕತೆ ಸ್ಯಾಮ ಪಿಟ್ರೋಡ್  ಹೇಳಿಕೆಯಲ್ಲಿ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಅಂತಹ ವ್ಯಕ್ತಿಗಳ ಮೂಲಕ ತನ್ನ ಅಜೆಂಡ್ ಹೊರ ಹಾಕುತ್ತಿದೆ. ಸಂಪತ್ತು ನ್ನು ಹಂಚಿಕೆ ಮಾಡುವ ಕಾಂಗ್ರೆಸ್ ನ ಮನಸ್ಥಿತಿಯನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕುಅಹಿಂದ ವರ್ಗದ ಮೀಸಲಾತಿ ಕಿತ್ತು ಕೊಡಬೇಕೆನ್ನುವ ಕಾಂಗ್ರೆಸ್ ಮನಸ್ಥಿತಿ ಅರ್ಥಮಾಡಿಕೊಂಡು ಮತದಾನ ಮಾಡಿ. ನಾಳೆ ನಡೆಯುವ ಚುನಾವಣೆಯಲ್ಲಿ  ಲೀಡ್ ಪಡೆಯುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ಹರಿಹರದಲ್ಲಿ ಬಿವೈ ವಿಜಯೇಂದ್ರ ಬೃಹತ್ ರೋಡ್ ಶೋ ನಡೆಸಿದರು. ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ಪ್ರಚಾರ ನಡೆಸಿದರು.‌ಪಟ್ಟಣದ ಎಪಿಎಂಸಿ ಆವರಣದಿಂದ ಹರಪನಹಳ್ಳಿ ವೃತ್ತದವರೆಗೆ ರೋಡ್ ಶೋ ನಡೆಯಿತು. ರೋಡ್ ಶೋ ನಲ್ಲಿ ಸಂಸದ ಜಿ ಎಂ ಸಿದ್ದೇಶ್ವರ್,ಶಾಸಕ ಬಿ ಪಿ ಹರೀಶ್ ಮಾಜಿ ಶಾಸಕ ಹಚ್ ಎಸ್ ಶಿವಶಂಕರ ಬಿವೈವಿಗೆ ಸಾಥ್ ನೀಡಿದರು. ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಮತದಾರನ ಮನಸ್ಸು ಕದಿಯಲು ಕಾಂಗ್ರೆಸ್ ಇನ್ನಿಲ್ಲದ ಪ್ರಯತ್ನ

ಮತದಾರರ ಮನಸ್ಸು ಗೆಲ್ಲಬೇಕೆಂದು ಕಾಂಗ್ರೆಸ್ಸಿನವರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು, ಕಾಂಗ್ರೆಸ್ಸಿನವರು ಎಷ್ಟೇ ಪ್ರಯತ್ನಪಟ್ಟರೂ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪರ ಮತದಾರರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಪರ ಇರಬೇಕೆಂದು ಮತದಾರರು ಗಟ್ಟಿ ತೀರ್ಮಾನ ಮಾಡಿದ್ದು, ರಾಜ್ಯದಲ್ಲಿ ನಿರೀಕ್ಷೆಯನ್ನೂ ಮೀರಿ ಬಿಜೆಪಿ ಪರವಾದ ವಾತಾವರಣ ಇದೆ ಎಂದರು. 

ರಾಜ್ಯದ 28 ಕ್ಷೇತ್ರದಲ್ಲೂ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸ ನಮಗಿದೆ. ದಾವಣಗೆರೆ ಕ್ಷೇತ್ರದಲ್ಲಿ ಬೂತ್ ಅಧ್ಯಕ್ಷರ ಸಭೆ, ಹರಿಹರದಲ್ಲಿ ರೋಡ್ ಶೋನಲ್ಲಿ ಭಾಗವಹಿಸುವೆ. ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲುತ್ತದೆ. ಪ್ರಧಾನಿ ನರೇಂದ್ರ ಮೋದಿ ಸಹ ಏ.28ಕ್ಕೆ ಇಲ್ಲಿ ಪ್ರಚಾರಕ್ಕೆ ಇಲ್ಲಿಗೆ ಬರಲಿದ್ದಾರೆ. ಇಲ್ಲಿ ಗಾಯತ್ರಿ ಸಿದ್ದೇಶ್ವರ ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದು ಅವರು ಹೇಳಿದರು. 

ಚುನಾವಣೆ ಘೋಷಣೆಗೆ ಮುನ್ನ ದಾವಣಗೆರೆಯಲ್ಲಿ ತುಂಬಾ ಗೊಂದಲ ಇತ್ತು. ಈಗ ಅದೆಲ್ಲವನ್ನೂ ಮರೆತು, ಒಗ್ಗಟ್ಟಿನಿಂದ ನಮ್ಮೆಲ್ಲಾ ಮುಖಂಡರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲೂ ದಿನದಿಂದ ದಿನಕ್ಕೆ ವಾತಾವರಣ ಚನ್ನಾಗಿ ಆಗುತ್ತಿದೆ. ಅಲ್ಲಿನ ಕಾರ್ಯಕರ್ತರೆಲ್ಲರೂ ರಣೋತ್ಸಾಹದಲ್ಲಿದ್ದಾರೆ. ನಾವು ಬಿ.ವೈ.ರಾಘವೇಂದ್ರ 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆಂದುಕೊಂಡಿದ್ದೆವು. ಈಗ ಅಲ್ಲಿನ ಕಾರ್ಯಕರ್ತರ ಉತ್ಸಾಹ ನೋಡಿ, ರಾಘವೇಂದ್ರರವರು 4 ಲಕ್ಷ ಮತಗಳ ಅಂತರದ ಜಯ ದಾಖಲಿಸಲಿದ್ದಾರೆ ಎಂದು ಅವರು ತಿಳಿಸಿದರು. 

ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಬಿಟ್ಟು ಬೇರೆ ಯಾರೂ ಇಲ್ಲ. ರಾಘವೇಂದ್ರರಿಗೆ ಸರಿಸಾಟಿಯಾಗಿ ಕೂಡ ಯಾರೂ ಅಲ್ಲಿಲ್ಲ. ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ ಸೇರಿದಂತೆ 

ಹಲವಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಕನಸು ಕಾಣುತ್ತಿದೆ. ಆದರೆ, ಎಲ್ಲಾ ಕಡೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರವಾದ ವಾತಾವರಣ ಇದೆ. ನಾವಂತೂ ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಲಿದ್ದೇವೆ ಎಂದು ವಿಜಯೇಂದ್ರ ಪುನರುಚ್ಛರಿಸಿದರು.

Share.
Leave A Reply

Exit mobile version