ದಾವಣಗೆರೆ: ದೇವ ನಗರಿ ದಾವಣಗೆರೆಯಲ್ಲಿ ನಡೆಯಲಿರುವ ಅಖಿಲ ಭಾರತ ವೀರಶೈವ ಮಹಾಸಭಾದ 24 ನೇ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಸಜ್ಜಾಗುತ್ತಿದ್ದು, ಪ್ರಚಾರದ ಕಾರ್ಯಕ್ರಮದ ವಾಹನಕ್ಕೆ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.

ಡಿಸೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಗರದಲ್ಲಿ ಎಂಬಿಎ ಕಾಲೇಜಿನಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಸುಮಾರು ಎರಡು ಲಕ್ಷಕ್ಕೂ ಅಧಿಕ ಜನರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.

ಎಲ್ಲ ಅಚ್ಚುಕಟ್ಟಾಗಿ ಇರಲಿದೆ

ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಮಾಡಲಾಗುತ್ತಿದ್ದು. ಪ್ರತಿನಿಧಿಗಳಿಗೆ ಊಟ, ವಸತಿ ಇತ್ಯಾದಿ ವ್ಯವಸ್ಥೆಗಳು ಜರುಗುತ್ತಿವೆ. ಮುಂದಿನ ಮರ‍್ನಾಲ್ಕು ದಿನಗಳಲ್ಲಿ ಆಹ್ವಾನ ಪತ್ರಿಕೆ ಸಿದ್ಧಗೊಳ್ಳಲಿದೆ. ಈಗಾಗಲೇ ಅಧಿವೇಶನಕ್ಕೆ ನಾಡಿನ ವಿವಿಧ ಮಠಾಧೀಶರು, ಹರ, ಗುರು ಚರಮೂರ್ತಿಗಳ ಸೇರಿದಂತೆ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಮಹಾಸಭಾ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್ ಮಾತನಾಡಿ, ಅಧಿವೇಶನಕ್ಕೆ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ. ಪೆಂಡಾಲ್ ನಿರ್ಮಾಣ ಕಾರ್ಯ ಬರದಿಂದ ನಡೆಯುತ್ತಿದೆ. ನಾಡಿನ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಈಗಾಗಲೇ ತಿಳಿಸಿದಂತೆ ಎರಡು ದಿನದ ಕಾರ್ಯಕ್ರಮದಲ್ಲಿ ಅಂದಾಜು 2 ಲಕ್ಷ ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆ ಇದೆ. ಅಧಿವೇಶನ ಅತ್ಯಂತ ಸುವ್ಯವಸ್ಥೆಯಿಂದ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಕೆ.ಜಿ.ಶಿವಕುಮಾರ್ ಅಧಿವೇಶನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share.
Leave A Reply

Exit mobile version