ರಾಜ್ಯದ ಅಭಿವೃದ್ಧಿ ಮತ್ತು ಗ್ಯಾರಂಟಿಗೆ ಹಣ ಕ್ರೋಢೀಕರಿಸಲು, ಆಗದೆ, ಬಿಪಿಎಲ್ ಕಾರ್ಡ್ ರದ್ದು, ಬಡವರ ಮೇಲೆ ಪ್ರಹಾರ ಮಾಡಲಾಗುತ್ತಿದೆ ಬಿಜೆಪಿ  ರಾಜ್ಯ ಘಟಕದ ಅಧ್ಯಕ್ಷ  ಬಿ.ವೈ.ವಿಜಯೇಂದ್ರ.

ಶಿವಮೊಗ್ಗ:

ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ಕುದುರೆ ವ್ಯಾಪಾರ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಆಪರೇಷನ್ ಮಾಡುತ್ತಿಲ್ಲ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಮಯ ಹತ್ತಿರವಾಗಿದೆ. ಹಾಗಾಗಿಯೇ ಕಾಂಗ್ರೆಸ್ ಪಕ್ಷದೊಳಗೆ ಕುದುರೆ ವ್ಯಾಪಾರ ನಡೆಯುತ್ತಿದೆ. ಎಷ್ಟೆಷ್ಟು ಶಾಸಕರನ್ನು ದುಡ್ಡು ಕೊಟ್ಟು ಖರೀದಿಸಬಹುದು ಎಂಬ ಪೈಪೋಟಿ ಕಾಂಗ್ರೆಸ್‌ನೊಳಗೆ ಇದೆ. ₹50 ಕೋಟಿ ಕೊಡುತ್ತಾರೋ, ₹100 ಕೋಟಿ ಕೊಡುತ್ತಾರೋ ಆ ಪಕ್ಷದ ಘಟಾನುಘಟಿಗಳಿಗೆ ಬಿಟ್ಟದ್ದು’ ಎಂದರು.

‘ಶಾಸಕ ರವಿ ಗಾಣಿಗ ಮಾತ್ರವಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಾಸಕರ ಖರೀದಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಕುದುರೆ ವ್ಯಾಪಾರಕ್ಕೆ ಇದೇ ಸಾಕ್ಷಿ’ ಎಂದು ಹೇಳಿದರು.

‘15 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಮತ್ತು ಗ್ಯಾರಂಟಿಗೆ ಹಣ ಕ್ರೋಢೀಕರಿಸಲು ಆಗುತ್ತಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಬಡವರ ಮೇಲೆ ಪ್ರಹಾರ ಮಾಡಲಾಗುತ್ತಿದೆ. ಈ ಸರ್ಕಾರವನ್ನು ಬಡವರು ಕ್ಷಮಿಸುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Share.
Leave A Reply

Exit mobile version