


ಚನ್ನಗಿರಿ: ವಿನಯಮಾರ್ಗ ಟ್ರಸ್ಟ್ ವತಿಯಿಂದ ದಾವಣಗೆರೆ ಲೋಕಸಭಾ ವ್ಯಾಪ್ತಿಯಲ್ಲಿನ ವಿಧಾನ ಸಭಾ ಕ್ಷೇತ್ರಗಳಲ್ಲಿ ವಿನಯ ನಡೆ ಹಳ್ಳಿಯ ಕಡೆಗೆ ಎಂಬ ವಿನೂತನ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪ್ರಬಲ ಅಭ್ಯರ್ಥಿ ವಿನಯ್‌ಕುಮಾರ್ ಹೇಳಿದರು.
ಪಟ್ಟಣದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈಗಾಗಲೇ ಜಗಳೂರು, ನ್ಯಾಮತಿ, ಹರಪನಹಳ್ಳಿ, ಹರಿಹರ, ತಾಲೂಕುಗಳಲ್ಲಿ ಪಾದಯಾತ್ರೆ ಮಾಡಿದ್ದು, ಜನರ ಸಂಕಷ್ಟಗಳನ್ನು ಅರಿಯುವಂತಹ ಕೆಲಸ ಮಾಡಿದ್ದೇನೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನವರಿ 9 ರಿಂದ ತಾಲೂಕಿನ ಹಾಲೇಶಪುರ ಗ್ರಾಮದಿಂದ ಪ್ರಾರಂಭವಾಗಲಿದ್ದು, ಜನವರಿ 14 ರಂದು ಕಾಶೀಪುರ ಕ್ಯಾಂಪ್ ಗ್ರಾಮಕ್ಕೆ ಮುಕ್ತಾಯಗೊಳ್ಳಲಿದೆ.

ಪಾದಯಾತ್ರೆ ಪ್ರಾರಂಭದಿಂದ ಮುಕ್ತಾಯದವರೆಗೂ ಪ್ರತಿನಿತ್ಯ ರಾತ್ರಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮದ ಮುಖಂಡರ ಜೊತೆಗೂಡಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗುವುದು.
ವಿನಯ ಮಾರ್ಗ ಟ್ರಸ್ಟ್ ವತಿಯಿಂದ ಈಗಾಗಲೇಅನೇಕ ಜನೋಪಯೋಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಎರಡು ಸಾವಿರ ವಿಕಲ ಚೇತನರಿಗೆ ವೀಲ್‌ಚೇರ್,ವಾಕಿಂಗ್‌ಸ್ಟಿಕ್. ವಾಕರ್‌ಗಳು ಮತ್ತು ಶ್ರವಣ ಯಂತ್ರಗಳನ್ನು ನೀಡಲಾಗಿದೆ. ಮಕ್ಕಳಿಗೆ ಶೈಕ್ಷಣಿಕವಾಗಿ ಸಾಕಷ್ಟು ಸಹಾಯ ಮಾಡಲಾಗಿದೆ.
ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ. ವಿವಿಧ ಸ್ಪರ್ದಾತ್ಮಕ ಪರೀಕ್ಷಾ ಮಾರ್ಗದರ್ಶಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮನೋಸ್ಥೇರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ.
ತಾಲೂಕಿನ ಎಲ್ಲಾ ಕಡೆಗಳಲ್ಲಿ ಜನರು ಸ್ಪಂದಿಸುತ್ತಿದ್ದು ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ಬಾಕಿ ಇವೆ. ಕ್ಷೇತ್ರದ ಜನರು ಕೊಡ ಬದಲಾವಣೆಯನ್ನು ಬಯಸಿದ್ದು ನನಗೂ ಕೂಡ ಚುನಾವಣೆಯಲ್ಲಿ ಜನರು ಒಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಕೃಷ್ಣಮೂರ್ತಿ, ಅಣ್ಣಪ್ಪ, ಹಾಲೇಶ್, ರಂಗಸ್ವಾಮಿ ಇತರರು ಹಾಜರಿದ್ದರು.