ಚನ್ನಗಿರಿ: ಮಕ್ಕಳು ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಪಠ್ಯತೇರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾನಸಿಕವಾಗಿ ದೈಹಿಕವಾಗಿ ಸದೃಡರಾಗಲು ಸಾಧ್ಯ ಎಂದು ಶಾಸಕ ಬಸವರಾಜು ಶಿವಗಂಗಾ ಹೇಳಿದರು.
ತಾಲೂಕಿನ ಹಿರೇಕೋಗಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚನ್ನಗಿರಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಿರೇಕೋಗಲೂರು ನನ್ನ ಸ್ವಗ್ರಾಮವಾಗಿದ್ದು, ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತೇನೆ. ಅಲ್ಲದೇ ಶೈಕ್ಷಣಿಕವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಇಓ. ಜಯ್ಯಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹಾಲಸಿದ್ದಪ್ಪ, ಬಿ.ಆರ್.ಸಿ. ಶಂಕರಪ್ಪ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಕುಮಾರ್, ಗ್ರಾ.ಪಂ. ಅಧ್ಯಕ್ಷೆ ಸುಮ ಶಿವಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಇತರರು ಹಾಜರಿದ್ದರು.