ದಾವಣಗೆರೆ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ದಾವಣಗೆರೆ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಮತಯಾಚನೆ ಮಾಡಿದರು. ನಂತರ ಮಾತನಾಡಿದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಈಗಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಜನರೂ ಸಾಕಷ್ಟು ನೊಂದಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇಂತಹ ಭ್ರಷ್ಟ ಮತ್ತು ಕೆಟ್ಟ ಆಡಳಿತ ಸರ್ಕಾರವನ್ನು ಎಂದೂ ನೋಡಿಲ್ಲ ಎಂದರು. ಇನ್ನು ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸುವಂತೆ ಕ್ಷೇತ್ರದ ಜನರಲ್ಲಿ ಮನವಿಯನ್ನು ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್. ಆರ್. ನಿರಾಣಿ ಹಾಗೂ ಶಾಸಕರುಗಳು ಮತ್ತು ಮಾಜಿ ಶಾಸಕರುಗಳು ಹಾಗೂ ಇನ್ನೂ ಆನೇಕ ಮುಖಂಡರು ಉಪಸ್ಥಿತರಿದ್ದರು.

Share.
Leave A Reply

Exit mobile version