
ದಾವಣಗೆರೆ: ರಾಜ್ಯ ಚಿತ್ರಕಲಾ ಪರಿಷತ್ ವತಿಯಿಂದ ಮಾ.3 ಕ್ಕೆ ದಾವಣಗೆರೆಯಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ.
ಈ ಬಾರಿ ಚಿತ್ರಸಂತೆಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ಮಹಾರಾಷ್ಟ್ರ, ತಮಿಳುನಾಡು, ಒಡಿಶಾ, ರಾಜಸ್ಥಾನ, ಆಂಧ್ರಪ್ರದೇಶದಿಂದ ಕಲಾವಿದರು ಭಾಗವಹಿಸಲಿದ್ದಾರೆ. ಕಳೆದ ವರ್ಷ ಚಿತ್ರಸಂತೆಗೆ ಉತ್ತಮ ಸ್ಪಂದನೆ ಸಿಕ್ಕಿತ್ತು ಎಂದು ಚಿತ್ರಕಲಾಪರಿಷತ್ನ ಕಾರ್ಯದರ್ಶಿ ಡಿ. ಶೇಷಾಚಲ ಮಾಹಿತಿ ನೀಡಿದ್ದಾರೆ.
ಮಾ.3ರಂದು ಬೆಳಿಗ್ಗೆ 8ರಿಂದ ರಾತ್ರಿ 7ರವರೆಗೆ ಕ ಚಿತ್ರಕಲೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.


ದಾವಣಗೆರೆಯ ಎ.ವಿ.ಕಮಲಮ್ಮ ಮಹಿಳಾ ಕಾಲೇಜು ರಸ್ತೆಯಲ್ಲಿ ಈ ಸಂತೆ ನಡೆಯಲಿದೆ. ದಾವಣಗೆರೆಯ ಸ್ಥಳೀಯ ಚಿತ್ರಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಳೆದ ಎರಡು ವರ್ಷಗಳಿಂದ ಚಿತ್ರಸಂತೆ ನಡೆಸಿಕೊಂಡು ಬರಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆಯುವ ಚಿತ್ರಸಂತೆ ಗಿಂತಲೂ ಹೆಚ್ಚಿನ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಚಿತ್ರಕಲಾ ಪರಿಷತ್ತು ಅಧ್ಯಕ್ಷ ಡಿ.ಸಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಶಾಮನೂರು ಶಿವಶಂಕರಪ್ಪ, ಡಿ.ಜಿ. ಶಾಂತನಗೌಡ, ಕೆ.ಎಸ್. ಬಸವಂತಪ್ಪ, ಬಿ. ದೇವೇಂದ್ರಪ್ಪ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಮಹಾನಗರ ಪಾಲಿಕೆ ಆಯುಕ್ತೆ ಜಿ. ರೇಣುಕಾ ಇತರರು ಭಾಗವಹಿಸುವರು ಎಂದು ತಿಳಿಸಿದರು.
ಸಂಜೆ ಏನು ಕಾರ್ಯಕ್ರಮ ?
ಸಂಜೆ 5.15ಕ್ಕೆ ನಡೆಯುವ ಸಮಾರೋಪದಲ್ಲಿ ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಬಸವ ರಾಜ ಶಿವಗಂಗಾ, ಮಾಜಿ ಶಾಸಕ ಎಚ್.ಎಸ್. ಶಿವ ಶಂಕರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್ , ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್ ಇತರರು ಭಾಗವಹಿಸುವರು ಎಂದು ತಿಳಿಸಿದರು. ಹೊರಗಡೆಯಿಂದ ಬಂದಂತಹ ವರಿಗೆ ಉಚಿತವಾಗಿ ವಸತಿ ಇತರೆ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಪ್ರಮಾಣಪತ್ರ, ಪ್ರತಿಭಾವಂತ ಕಲಾವಿದರು, ಉತ್ತಮ ಮಳಿಗೆ ಸಿದ್ದಪಡಿಸಿಕೊಂಡವರಿಗೆ 9 ನಗದು ಬಹುಮಾನ ನೀಡ ಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪರಿಷತ್ತು ಅಧ್ಯಕ್ಷ ಡಿ.ಸಿ. ಶ್ರೀನಿವಾಸ್, ಶಾಂತಯ್ಯ ಪರಡಿಮಠ್, ಎಂ. ಅಶೋಕ್, ಎಂ.ಎಸ್. ಚೇತನ್, ಎ. ಶಿವಕುಮಾರ್ ಇತರರು ಇದ್ದರು