ಚಿತ್ರದುರ್ಗ : ತಾಲ್ಲೂಕಿನ ಕೆ. ಬಳ್ಳಕಟ್ಟೆ ಗ್ರಾಮದ ಬಳಿಯ ರಾಷ್ಟೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಕಾರಿನ ಚಾಲಕನ ಅಜಾಗರೂಕತೆಯಿಂದ ಈ ಅಪಘಾತವಾಗಿದೆ ಎಂದು ಸ್ಥಳೀಯರು ಮಾಹಿತಿಯನ್ನು ನೀಡಿದ್ದು, ಚಿತ್ರದುರ್ಗದ ಕಡೆಯಿಂದ ದಾವಣಗೆರೆ ಕಡೆಗೆ ತೆರಳುವಂಥ ಸಂದರ್ಭದಲ್ಲಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದರಿಂದ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಒಬ್ಬರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನಾ ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.