ಭದ್ರಾವತಿ: ಸರ್ಕಾರದ ಆದೇಶದಂತೆ ನಗರಸಭೆ ವ್ಯಾಪ್ತಿಯಲ್ಲಿ ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸುವ ಸಂಬಂಧ ಈಗಾಗಲೇ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಯಂತೆ ಮಾ: 21 ರೊಳಗಾಗಿ ನಾಮಪಲಕ ಗಳನ್ನು ಅಳವಡಿಸಿಕೊಳ್ಳತಕ್ಕದ್ದು, ಇಲ್ಲವಾದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಆಡಳಿತ ತಿಳಿಸಿದೆ.

ಫೆ.26ರ ಸರ್ಕಾರದ ಅಧಿಸೂಚನೆಯಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ರ 17 ನೇ ಪ್ರಕರಣದ ತಿದ್ದುಪಡಿಯಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಎಂದು ತಿದ್ದುಪಡಿ ಮಾಡಲಾಗಿರುತ್ತದೆ. ಸರ್ಕಾರದ ಅಧಿಸೂಚನೆಯಂತೆ ನಗರಸಭೆ ವ್ಯಾಪ್ತಿಯಲ್ಲಿ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ಕ್ರಮ ಕೈಗೊಳ್ಳುವುದಾಗಿ ಪೌರಾಯುಕ್ತರು ತಿಳಿಸಿದ್ದಾರೆ

Share.
Leave A Reply

Exit mobile version