ದಾವಣಗೆರೆ : ಸಿಎಂ ಸಿದ್ದರಾಮಯ್ಯಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಂಚಿಕೆ ಹಗರಣ ಬಿಗಿಯಾದ ಬೆನ್ನಲ್ಲಿಯೇ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೃಹ ಸಚಿವ ಡಾ.ಜಿ. ಪರಮೇಶ್ವರ ಮನೆಗೆ ಆಗಮಿಸಿ ಗೌಪ್ತವಾಗಿ ಮಾತುಕತೆ ನಡೆಸಿರುವುದು, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಿದ್ದರಾಮಯ್ಯ ಬದಲಾವಣೆ ಫಿಕ್ಸ್ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾದ್ರೆ ಸಿದ್ದು ರಾಜೀನಾಮೆ ಕೊಡ್ತಾರಾ? ಯಾರಾಗ್ತಾರೆ ಮುಂದಿನ ಸಿಎಂ? ಈ ಕುರಿತು ಸ್ಟೋರಿ ಇಲ್ಲಿದೆ.
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ, ಗೃಹ ಸಚಿವ ಪರಮೇಶ್ವರ ಮನೆಗೆ ಭೇಟಿನೀಡಿ ಹಲವು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಇಷ್ಟುದಿನ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಿದ್ದ ನಾಯಕರು ಈಗ ವರಸೆ ಬದಲಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಕೇಸ್ ದಾಖಲಾಗುತಿದ್ದಂತೆ ಕಾಂಗ್ರೆಸ್ ನಾಯಕರ ವರಸೆ ಬದಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಇಡಿ ಬಂಧನ ಮಾಡುವ ಮುನ್ನ ರಾಜೀನಾಮೆ ಪಡೆಯಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಹೀಗಾಗಿಯೇ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು ಸಾಗಿದ್ದು ಕೈ ನಾಯಕರು ಡೆಲ್ಲಿಗೆ ಎಡತಾಗುತ್ತಿದ್ದಾರೆ. ಆದರೆ, ಡಿಕೆ.ಶಿವಕುಮಾರ್ ಅವರು ಮುಡಾ ಹಗರಣ ವಿಚಾರಕ್ಕೆ ಬಿಜೆಪಿಗೆ ತಿರುಗೇಟು ನೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳ ಕುರಿತು ಕಾರ್ಯತಂತ್ರ ರೂಪಿಸಲುವ ಕುರಿತು ಚರ್ಚೆ ನಡೆಸಿದ್ದಾರೆಂದು ಎಂದು ಸಮಜಾಯಿಸಿ ನೀಡುತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧದ ಸಂಡೂರು ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡದ (ಎಸ್ಐಟಿ) ಎಡಿಜಿಪಿ ಎಂ.ಚಂದ್ರಶೇಖರ್ ಕುರಿತು ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿಯವರು ಅಸ್ತಿತ್ವದಲ್ಲಿಲ್ಲದ ಶ್ರೀಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಗಣಿಗಾರಿಕೆ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತ ವಿಚಾರಣೆಗೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ರ ಅನುಮತಿಯನ್ನು ಎಸ್ಐಟಿ ಕೋರಿತ್ತು. ಮಾತುಕತೆ ವೇಳೆ ವೇಳೆ ಕೆಲ ಅಧಿಕಾರಿಗಳಿಂದ ಕುಮಾರಸ್ವಾಮಿಗೆ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಶಿವಕುಮಾರ್ ಹೇಳಿದ್ದು, ಈ ಸಂಬಂಧ ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಕೆ.ಶಿವಕುಮಾರ್ ಭೇಟಿ ಬಳಿಕ ಪರಮೇಶ್ವರ, ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದು, ಈ ವೇಳೆ ಚುನಾವಣಾ ಬಾಂಡ್ ಹಗರಣದಲ್ಲಿ ನಿರ್ಮಲಾ ಸೀತಾರಾಮನ್ ವಿರುದ್ಧ ದಾಖಲಾಗಿರುವ ಎಫ್ಐಆರ್ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಪರಮೇಶ್ವg, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು ಮತ್ತು ಡಿ.ಕೆ.ಶಿವಕುಮಾರ್ ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.
ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಾವು ಭೇಟಿ ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.ಆದರೆ, ರಾಜ್ಯ ರಾಜಕಾರಣದಲ್ಲಿ ಬೇರದ್ದೆಯಾದ ಚರ್ಚೆ ನಡೆಯುತ್ತಿದ್ದು, ಮೂರು ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಸಿಎಂ ಪತ್ನಿ ತಮಗೆ ನೀಡಿದ 14ಸೈಟ್ ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಇನ್ನೊಂದೆಡೆ ಇಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ ಕೊಂಡಿದೆ. ಕಾಂಗ್ರೆಸ್ ನಾಯಕರು ಡೆಲ್ಲಿಗೆ ಪ್ರವಾಸ ನಡೆಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಹೊಸ ಸಂಚಲನವೇ ಮೂಡಿಸಿದೆ.ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಸಿದ್ದಂತೂ ಸುಳ್ಳಲ್ಲ.