
ದಾವಣಗೆರೆ :
ರಾಜ್ಯದಲ್ಲಿ ಪವರ್ ಶೇರಿಂಗ್ ಚರ್ಚೆ ಜೋರಾಗಿರುವ ಬೆನ್ನಲ್ಲೆ ಚನ್ನಗಿರಿ ಶಾಸಕ ಶಿವಗಂಗಾ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹೌದು..ಆಗಾಗ ಸುದ್ದಿಯಲ್ಲಿರುವ ಶಾಸಕ ಶಿವಗಂಗಾ ಬಸವರಾಜ್ ಕಟ್ಟಾ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮಾನಿಯಾಗಿದ್ದು, ಆಗಾಗ ಒಂದೊಂದು ಹೇಳಿಕೆ ಕೊಡುತ್ತಿರುತ್ತಾರೆ..ಅಲ್ಲದೇ ಸದಾ ವಿವಾದದಲ್ಲಿ ಇರುತ್ತಾರೆ..ಈ ಹಿಂದೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದವೂ ಹೇಳಿಕೆ ನೀಡಿದ್ದರು. ಅಲ್ಲದೇ ಇತ್ತೀಚೆಗೆ ಜಾತಿ ಗಣತಿ ಬಿಡುಗಡೆ ಬಗ್ಗೆಯೂ ವಿರೋಧಿಸಿದ್ದರು. ಇದು ಹಳೆ ಕಥೆ ಬಿಡಿ. ಆದರೀಗ ಮತ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ಬಸವರಾಜ್ ಶಿವಗಂಗಾ ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ರಕ್ತದಲ್ಲಿ ಬೇಕಾದ್ರೆ ಬರೆದು ಕೊಡ್ತೀನಿ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಡಿಸೆಂಬರ್ ವೊಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೆ ಆಗ್ತಾರೆ. ಪಕ್ಷಕ್ಕಾಗಿ ಡಿಕೆ ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ.


80 ಶಾಸಕರು ಗೆಲ್ಲಲು ಡಿಕೆ ಶಿವಕುಮಾರ್ ಅವರ ಪಾತ್ರ ಇದೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರ್ತೀವಿ. ಇವಾಗಿನ ಡಿಸೆಂಬರ್ ನಿಂದ ಮುಂದಿನ 5 ವರ್ಷ ಅವರೆ ಮುಖ್ಯಮಂತ್ರಿ ಆಗಿರುತ್ತಾರೆ.
ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದಿದ್ದಾರೆ.ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ ಸರ್ಕಾರಕ್ಕೆ ಭಾರೀ ಮುಜುಗರ ಆಗ್ತಾ ಇದೆ. ಹೈಕಮಾಂಡ್ ಇದನ್ನ ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎನ್ನುತ್ತಾ ಕೆ ಎನ್ ರಾಜಣ್ಣಗೂ ಶಿವಗಂಗಾ ಟಾಂಗ್ ನೀಡಿದ್ದಾರೆ. ಅಲ್ಲದೇ ರಾಜಣ್ಣ ಮೇಲೆ ಕ್ರಮ ಕೈಗೊಂಡ್ರು ಎಲ್ಲಾ ಸರಿ ಹೋಗುತ್ತೇ ಎಂದು ಹೇಳಿದ್ದಾರೆ