ನಂದೀಶ್ ಭದ್ರಾವತಿ : ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ಗೆ ದೊಡ್ಡ ಹಿನ್ನಡೆಯಾಗಿದೆ. ನಿರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಆದರೆ, ಈ ಒಂದು ಅಂಶ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ಮೂವರು ಡಿಸಿಎಂ ಸೃಷ್ಟಿ ಮೂಲಕ ಸಿಎಂ ಸಿದ್ದರಾಮಯ್ಯ ಬಣದ ಸಚಿವರು ಡಿಸಿಎಂಗೆ ಹೊಸ ಸವಾಲು ಒಡ್ಡಿದ್ದಾರೆ.
ಅಷ್ಟೇಅಲ್ಲ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹೈಕಮಾಂಡ್ಗೆ ವರದಿ ಸಲ್ಲಿಸಲು ಸಿಎಂ ಬಣ ಮುಂದಾಗಿದೆ ಎನ್ನಲಾಗಿದೆ. ಹಾಗಾದ್ರೆ, ಡಿಸಿಎಂ ವಿರುದ್ಧ ದೂರು ಸಲ್ಲಿಸಲು ಮುಂದಾಗಿದ್ಯಾಕೆ? ದೆಹಲಿಗೆ ಭೇಟಿಗೆ ಕಾಂಗ್ರೆಸ್ ಸಚಿವರು ಮುಂದಾಗಿದ್ಯಾಕೆ? ಡಿಸಿಎಂ ಪರ ನಿಂತ ಶಾಸಕರೆಷ್ಟು..?
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆ ಆಗುತ್ತಿದ್ದಂತೆ ಪಕ್ಷದಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿದೆ. ಸಮುದಾಯವಾರು ಡಿಸಿಎಂ ಹುದ್ದೆ ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ಜಾರಕಿಹೋಳಿ, ಜಮೀರ್ ಅಹಮದ್ ಖಾನ್ ಡಿಸಿಎಂ ಹುದ್ದೆ ನೀಡಬೇಕು ಎಂಬ ಧ್ವನಿಯೆತ್ತಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ಗೆ ಒಕ್ಕಲಿಗ ಮತಗಳನ್ನು ತಂದುಕೊಡಲು ವಿಫಲರಾದ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಹೈಕಮಾಂಡ್ ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಷ್ಠಾವಂತರು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ ಜೊತೆಗೆ ಮೂವರು ಡಿಸಿಎಂ ಹುದ್ದೆ ಸೃಷ್ಟಿಗೂ ಪ್ರಸ್ತಾಪ ಮುಂದೂಡಿಲದ್ದಾರೆ ಎನ್ನಲಾಗಿದೆ.
ಡಿಸಿಎಂ ವೈಫಲ್ಯ ವಿಷಯ ಹೈಕಮಾಂಡ್ ಅಂಗಳಕ್ಕೆ ಮುಟ್ಟಿಸಲು ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯದ ಸಚಿವರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈ ತಂತ್ರಕ್ಕೆ ತಿರುಗೇಟು ನೀಡಲು ಡಿಎಸಿಎಂ ಡಿ.ಕೆ ಶಿವಕುಮಾರ್ ಮತ್ತೊಂದು ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ.
ಈ ಸಂಬಂಧ ಖಾಸಗಿ ಏಜೆನ್ಸಿಯೊಂದರ ಸಮೀಕ್ಷೆ ಆಧರಿಸಿ ಡಿಕೆ ಶಿವಕುಮಾರ್ ವರದಿ ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ. ಈ ವರದಿಯ ಪ್ರಕಾರ, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯದ ಮತದಾರರು ಹಳೇ ಮೈಸೂರು ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲಿಲ್ಲ ಎಂದು ಹೇಳಲಾಗಿದೆ.
ಶಿವಕುಮಾರ್ ಅವರು ಪಕ್ಷದ ಹೈಕಮಾಂಡ್ ಮುಂದೆ ವರದಿಯನ್ನು ಮಂಡಿಸಿ ಸಿದ್ದರಾಮಯ್ಯ ನಿಷ್ಠರನ್ನು ಕೆಣಕಬಹುದು. ಈ ಸಮುದಾಯಗಳು ಕಾಂಗ್ರೆಸ್ನೊಂದಿಗೆ ಇಲ್ಲ ಎಂಬ ಅಂಶವನ್ನು ಅವರು ಹೈಕಮಾಂಡ್ ಗಮನಕ್ಕೆ ತರಲು ಬಯಸಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯದಿಂದ ಬಂದಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಿದ ಕುರುಬರು ಸಮುದಾಯ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸಲಿಲ್ಲ. ಹಾಸನ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಪಕ್ಷ ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಏತನ್ಮಧ್ಯೆ, ಮಾಜಿ ಸಚಿವ ವಿನಯ್ ಕುಲಕರ್ಣಿ ನೇತೃತ್ವದ ಸುಮಾರು 15 ವೀರಶೈವ-ಲಿಂಗಾಯತ ಶಾಸಕರ ನಿಯೋಗ ಶೀಘ್ರದಲ್ಲೇ ನವದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನಿಷ್ಠಾವಂತರು ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅವರ ವಿರುದ್ಧ ದೂರು ಸಲ್ಲಿಸುವ ಸಾಧ್ಯತೆಯಿದೆ.
ಮತ್ತೊಂದು ಕಡೆ ಲಿಂಗಾಯತ ನಾಯಕತ್ವದ ಮೇಲೆ ಸೋಮಣ್ಣ ಕಣ್ಣಿಟ್ಟಿದ್ದಾರೆ..ಈ ನಿಟ್ಟಿನಲ್ಲಿ ಎನ್ಡಿಎ ಅಭಿನಂದನಾ ಸಭೆಯಲ್ಲಿ ಆಡಿದ ಮಾತೊಂದು ಇದಕ್ಕೆ ಪುಷ್ಟಿ ನೀಡಿದೆ..